ನಾಳೆ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ..
1 min readಚಿತ್ರದುರ್ಗ:
ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಮಾರ್ಚ್ 13ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಮಾರ್ಚ್ 12 ರಂದು ಸಂಜೆ 4.00 ಗಂಟೆಗೆ ಹೊಸಪೇಟೆಯಿಂದ ಹೊರಟು ಚಿತ್ರದುರ್ಗಕ್ಕೆ ಆಗಮಿಸಿ, ಸಂಜೆ 5.30ಕ್ಕೆ ಚಿತ್ರದುರ್ಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮಾರ್ಚ್ 13 ರಂದು ಶನಿವಾರ ಬೆಳಿಗ್ಗೆ 8.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವನಹಳ್ಳಿಯಲ್ಲಿ ಆಯೋಜಿಸಿರುವ ಚರ್ಮ ಶಿಲ್ಪಿ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಬೆಳಘಟ್ಟದ ಶ್ರೀಗುರುಕರಿಬಸವೇಶ್ವರ ಅಜ್ಜಯ್ಯ ಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆಳಿಗ್ಗೆ 11.00 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಬಿದುರ್ಗದ ಇಂದಿರಾ ಗಾಂಧಿ ವಸತಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 12.00 ಗಂಟೆಗೆ ಹೊಳಲ್ಕೆರೆ ರಸ್ತೆ ಮೂಲಕ ಅರಸೀಕೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.