May 12, 2024

Chitradurga hoysala

Kannada news portal

ಜಿಲ್ಲೆಯಲ್ಲಿ ಮೂವರಿಗೆ ಕೋವಿಡ್ ಸೋಂಕು ದೃಢ

1 min read

ಚಿತ್ರದುರ್ಗ,ಮಾರ್ಚ್13:
 ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ ಮೂವರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 14,983ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ ಆರು ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 747 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ ಮೂವರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 14,983ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 14,879 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 35 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,21,633 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 3,39,930 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,24,480 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 216 ಜನರ ವರದಿ ಬರುವುದು ಬಾಕಿ ಇದೆ. 683 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *