ಸರ್ಕಾರಿ ನೌಕರರ ಮನವಿಗೆ ಸರ್ಕಾರದಿಂದ ಉತ್ತಮ ಸ್ಪಂದನೆ.
1 min readಹಿರಿಯೂರು :ರಾಜ್ಯ ಸರ್ಕಾರ 2020-21ನೇ ಸಾಲಿನ ಬಜೆಟ್ ನಲ್ಲಿ ಸರ್ಕಾರಿ ನೌಕರರ ಮನವಿಗೆ ಸರ್ಕಾರದಿಂದ ಅತ್ಯುತ್ತಮ ಸ್ಪಂದನೆ ದೊರೆತಿದೆ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಆರ್. ಶಿವಕುಮಾರ್ ತಿಳಿಸಿದ್ದಾರೆ. ನೌಕರರು ಹಾಗೂ ಅವಲಂಬಿತರಿಗೆ ಈಗ ಚಾಲ್ತಿಯಲ್ಲಿರುವ ಜ್ಯೋತಿ ಸಂಜೀವಿನಿ ಯೋಜನೆಯನ್ನು ಮಾರ್ಪಡಿಸಿ ಶಸ್ತ್ರ ಚಿಕಿತ್ಸೆ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ವಿಧಾನಗಳಿಗೆ ನಗದು ರಹಿತ ಚಿಕಿತ್ಸೆ ನೀಡಲು ಪ್ರಸ್ತಾಪಿಸಲಾಗಿದೆ. ಈ ಯೋಜನೆ ಏಪ್ರಿಲ್ 1ರಿಂದಲೇ ರಾಜ್ಯದಲ್ಲಿ ಜಾರಿಯಾಗಲಿದೆ ಎಚ್ಆರ್ ಎಂ ಎಸ್ 2 ಯೋಜನೆಯಡಿ ರಾಜ್ಯದ ಎಲ್ಲ ಸರ್ಕಾರಿ ನೌಕರರ ಸೇವೆಯನ್ನು ಆನ್ ಲೈನ್ ನ ಮೂಲಕ ಜಾರಿಗೊಳಿಸಲು ಸಮ್ಮತಿಸಲಾಗಿದೆ ಎಂದು ತಿಳಿಸಿದ್ದಾರೆ. ಮಹಿಳಾ ನೌಕರರಿಗೆ ಆರು ತಿಂಗಳ ಕಾಲ ಆರೈಕೆ ರಜೆ ನೀಡಲು ತೀರ್ಮಾನಿಸಲಾಗಿದೆ .ಇದಲ್ಲದೆ ಪ್ರತಿ ವರ್ಷ ಏ.21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಘೋಷಣೆ ಮಾಡಿರುವದಕ್ಕೆಹರ್ಷ ವ್ಯಕ್ತಪಡಿಸಿದ್ದಾರೆ .