April 28, 2024

Chitradurga hoysala

Kannada news portal

ಡೇರೆ ಮುಕ್ತ ರಾಜ್ಯದ ಕನಸು: ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ

1 min read

ಚಿತ್ರದುರ್ಗ ಮಾ. ೧೭

ರಾಜ್ಯದಲ್ಲಿ ಮೂಲ ಸೌಕರ್ಯಗಳಿಲ್ಲದ, ಯಾವುದೇ ಸ್ಥಾನಮಾನ ಪಡೆಯದ ಸಮುದಾಯಗಳಾಗಿರುವ ಅಲೆಮಾರಿ, ಅರೆ ಅಲೆಮಾರಿಗಳು ಇಂದಿಗೂ ಡೇರೆ ಹಾಕಿಕೊಂಡು ಬದುಕುತ್ತಿದ್ದಾರೆ. ಅವರೆಲ್ಲರಿಗೂ ಸೂರು ಕಲ್ಪಿಸುವ ಮೂಲಕ ರಾಜ್ಯವನ್ನು ಡೇರೆ ಮುಕ್ತ ಮಾಡುವ ಕನಸು ಇದೆ ಎಂದು ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಹೇಳಿದರು.

ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲೆಮಾರಿಗಳ ಅಭಿವೃದ್ಧಿಗಾಗಿ ಇದೇ ಮೊದಲ ಬಾರಿಗೆ ನಿಗಮ ಸ್ಥಾಪಿಸಲಾಗಿದೆ. ಅದರ ಪ್ರಥಮ ಅಧ್ಯಕ್ಷನಾಗಿದ್ದೇನೆ. ಈಗ ಈ ನಿಗಮಕ್ಕೆ ೧೦ ಕೋಟಿ ಮಾತ್ರ ಅನುದಾನವಿದೆ. ಕನಿಷ್ಠ ೨೫೦ ಕೋಟಿ ನೀಡಬೇಕು ಎಂದು ಮುಖ್ಯಮಂತ್ರಿಯನ್ನು ಭೇಟಿಯಾಗಿ ಬೇಡಿಕೆ ಸಲ್ಲಿಸಲಿದ್ದೇನೆ’ ಎಂದು ತಿಳಿಸಿದರು.

ಗೊಲ್ಲ, ಹೆಳವ, ದೊಂಬಿದಾಸ, ಚೆನ್ನದಾಸ, ಬಯಲು ಪತ್ತಾರ, ಜೋಶಿ, ಬುಡುಬುಡಿಕೆ, ಪಿಚ್ಚಗುಂಟ್ಲ, ಗೋಂದಳಿ, ಬೈರಾಗಿ, ಗಾರುಡಿ ಹೀಗೆ ೪೬ ಸಮುದಾಯಗಳು ಅಲೆಮಾರಿ, ಅಲೆಮಾರಿಗಳಾಗಿವೆ. ರಾಜ್ಯದಲ್ಲಿ ಸುಮಾರು ೭೦ ಲಕ್ಷ ಜನಸಂಖ್ಯೆ ಇದೆ. ಶೇ ೯೫ರಷ್ಟು ಮಂದಿಗೆ ಯಾವುದೇ ಮೂಲ ಸೌಕರ್ಯಗಳಿಲ್ಲ. ಹಿಂದುಳಿದ ಕಲ್ಯಾಣ ವರ್ಗಗಳ ಇಲಾಖೆ ಹಾಗೂ ಸರ್ಕಾರದ ನೆರವಿನೊಂದಿಗೆ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಸಮೀಕ್ಷೆ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಅಗತ್ಯ ಇದೆ. ಈ ಸಮುದಾಯದ ಜನರಿಗೆ ಸರ್ಕಾರದ ಯೋಜನೆಗಳ ಕುರಿತು ಮಾರ್ಗದರ್ಶನ ನೀಡಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುವುದು. ಜನಪ್ರತಿನಿಧಿಗಳ ಜತೆಗೆ ಅಧಿಕಾರಿಗಳು ಕೂಡ ಈ ಸೌಲಭ್ಯ ವಂಚಿತ ಸಮುದಾಯಗಳ ಕಡೆಗೆ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

About The Author

Leave a Reply

Your email address will not be published. Required fields are marked *