ವಿಮಾನದಲ್ಲಿ ಹೆಣ್ಣು ಮಗುವಿಗೆ ಜನನ ನೀಡಿದ ತಾಯಿ ಎಲ್ಲಿ ಗೊತ್ತೆ.
1 min readಬೆಂಗಳೂರು: ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿಯೇ ಗರ್ಭಿಣಿಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ನಡೆದಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಇಂಡಿಗೋ ವಿಮಾನ ಹೊರಟಿತ್ತು. ಇದರಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ವಿಮಾನ ಆಗಸದಲ್ಲಿದ್ದ ವೇಳೆಯೇ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಇದೇ ವೇಳೆ ವಿಮಾನದಲ್ಲಿದ್ದ ವೈದ್ಯರ ಸಹಾಯದಿಂದ ಅಲ್ಲಿಯೇ ಆಕೆಗೆ ಹೆರಿಗೆ ಮಾಡಿಸಲಾಗಿದ್ದು, ಮಹಿಳೆ ಸುಂದರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.