May 19, 2024

Chitradurga hoysala

Kannada news portal

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ” ಹೆಣ್ಣುಸಿರಿನ ತಲ್ಲಣಗಳು ” ಸಾಧಕಿಯರಿಗೆ ಸನ್ಮಾನ.

1 min read

ಚಾಮರಾಜನಗರ:- ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ( ರಿ ) ಮತ್ತು ದಲಿತ ವಿದ್ಯಾರ್ಥಿ ಒಕ್ಕೂಟ ಮೈಸೂರು ವಿಶ್ವವಿದ್ಯಾಲಯ ಇವರ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ” ಹೆಣ್ಣುಸಿರಿನ ತಲ್ಲಣಗಳು ” ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಜನಿಸಿದ ಕುಮಾರಿ.ಕಮಲಮ್ಮ.ಪಿ ರವರು ಶಿಕ್ಷಣ ಕ್ಷೇತ್ರದಲ್ಲಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಾಮರಾಜನಗರ ಜಿಲ್ಲಾ ಸಂಸ್ಥೆಯಲ್ಲಿ ಜಿಲ್ಲಾ ಸಂಘಟಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.
62 ರ ಇಳಿ ವಯಸ್ಸಿನಲ್ಲೂ ಸೇವಾ ಕಾರ್ಯಗಳಿಗೆ ಬಹಳ ಉತ್ಸಾಹದಿಂದ ಬಂದು ಸೇವೆ ಸಲ್ಲಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಾರೆ ಇವರು ಜಿಲ್ಲೆಯಲ್ಲಿ ವಿವಿಧ ರೀತಿಯ ಸೇವಾ ಕಾರ್ಯ ಮಾಡಿ ಜಿಲ್ಲೆಗೆ ಮಾದರಿಯಾಗಿದ್ದಾರೆ, ದಿನಾಂಕ:- 14/03/2021 ನೇ ಭಾನುವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನಡೆದ ಹೆಣ್ಣುಸಿರಿನ ತಲ್ಲಣಗಳು” ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಅಭೂತಪೂರ್ವ ಸೇವೆಯನ್ನು ಪರಿಗಣಿಸಿ ಸನ್ಮಾನಿಸಲಾಗಿದೆ.

ವರದಿ:- ಪ್ರದೀಪ್.ಎಸ್
ಯಳಂದೂರು

About The Author

Leave a Reply

Your email address will not be published. Required fields are marked *