ಮಾ.21 ರಂದು ಹೊಳಲ್ಕೆರೆ ಚಾಲಕರ ತರಬೇತಿ ಕೇಂದ್ರ ಉದ್ಘಾಟನೆ, ನೂತನ ಬಸ್ ಘಟಕದ ಶಂಕುಸ್ಥಾಪನಾ ಸಮಾರಂಭ
1 min read******
ಚಿತ್ರದುರ್ಗ,ಮಾರ್ಚ್18:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಳಲ್ಕೆರೆ ಚಾಲಕರ ತರಬೇತಿ ಕೇಂದ್ರ ಉದ್ಘಾಟನಾ ಹಾಗೂ ನೂತನ ಬಸ್ ಘಟಕದ ಶಂಕುಸ್ಥಾಪನಾ ಸಮಾರಂಭವನ್ನು ಮಾರ್ಚ್ 21 ರಂದು ಬೆಳಿಗ್ಗೆ 11.00 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಬಸಾಪುರ ಗೇಟ್ ಸಮೀಪದ ಚಾಲಕರ ತರಬೇತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸಂ.ಸವದಿ ಅವರು ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರೂ ಹಾಗೂ ಶಾಸಕ ಎಂ. ಚಂದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಹಾಗೂ ಚಾಲಕರಿಗೆ ಬೆಳ್ಳಿ ಪದಕ ವಿತರಣೆ ಮಾಡುವರು.
ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ನೂತನ ಮಾರ್ಗಗಳ ಉದ್ಘಾಟನೆ ಮಾಡುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಕಂದಿಕೆರೆ, ಸಂಸದ ಎ.ನಾರಾಯಣ ಸ್ವಾಮಿ, ಶಾಸಕರಾದ ಜಿ.ರಘು ಆಚಾರ್, ವೈ.ಎ. ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ ಎಸ್.ಲಿಂಗಮೂರ್ತಿ, ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಜಾತಾ ಧನಂಜಯನಾಯ್ಕ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷ ಎಸ್.ಎನ್. ಈಶ್ವರಪ್ಪ, ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಎಂ.ರಾಜಪ್ಪ, ಆರ್.ನುಲೇನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಗಮ್ಮ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ. ಮಹೇಶ್ವರಪ್ಪ, ಎಂ.ಬಿ.ತಿಪ್ಪೇಸ್ವಾಮಿ, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಆರ್.ಗಿರಿಜಾ ಅಜ್ಜಯ್ಯ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಡಳಿ ನಿರ್ದೇಶಕರುಗಳಾದ ಪಿ.ರುದ್ರೇಶ್, ರಾಜು ವಿಠಲಸ ಜರತಾರಘರ, ಆರುಂಡಿ ನಾಗರಾಜ ಸೇರಿದಂತೆ ಹೊಳಲ್ಕೆರೆ ತಾಲ್ಲೂಕಿನ ಎಲ್ಲಾ ಚುನಾಯಿತಿ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ವಿಜಯ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.