May 1, 2024

Chitradurga hoysala

Kannada news portal

ಹೆಲ್ತ್ ಬುಲೆಟಿನ್: ಜಿಲ್ಲೆಯಲ್ಲಿ 5 ಜನರಿಗೆ ಕೋವಿಡ್ ಸೋಂಕು ದೃಢ.

1 min read

ಜಿಲ್ಲೆಯಲ್ಲಿ 5 ಜನರಿಗೆ ಕೋವಿಡ್ ಸೋಂಕು ದೃಢ
***
ಚಿತ್ರದುರ್ಗ,ಮಾರ್ಚ್22:
 ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 5 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,046ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 4 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 428 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 5 ಜನವರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 15,046ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 14,935 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 42 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,22,685 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 3,47,473 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,31,346 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 397 ಜನರ ವರದಿ ಬರುವುದು ಬಾಕಿ ಇದೆ. 684 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *