ಮಾರ್ಚ್ 23ರಂದು ಬೃಹತ್ ರಕ್ತದಾನ ಶಿಬಿರ
1 min readಚಿತ್ರದುರ್ಗ,ಮಾಚ್22:
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಹಾಗೂ ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಶಾಖೆ ಮತ್ತು ನಿಫಾ ಸಂಸ್ಥೆ(ಎನ್‍ಐಎಫ್‍ಎಎ) ಇವರ ಸಂಯುಕ್ತಾಶ್ರಯದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಹುತಾತ್ಮರಾದ ಭಗತ್ ಸಿಂಗ್, ರಾಜ್‍ಗುರು ಮತ್ತು ಸುಖದೇವ್ ಇವರುಗಳ 90ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಮಾರ್ಚ್ 23ರಂದು ಬೆಳಿಗ್ಗೆ 10 ಗಂಟೆಗೆ ನಗರದ ಐಎಂಎ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ನಂದಿನಿದೇವಿ ಘನ ಉಪಸ್ಥಿತಿ ವಹಿಸುವರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಶಾಖೆ ಅಧ್ಯಕ್ಷ ಕೆ. ಮಂಜುನಾಥ್ ಅಧ್ಯಕ್ಷತೆ ವಹಿಸುವರು.
ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ವೈ.ಬಿ. ಮಹೇಂದ್ರನಾಥ್, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸಾಲಿ ಮಂಜಪ್ಪ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ರಂಗನಾಥ್ ಹಾಗೂ ಜಿಲ್ಲಾ ವಾರ್ತಾಧಿಕಾರಿ ಬಿ. ಧನಂಜಯ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು