Recent Posts

October 16, 2021

Chitradurga hoysala

Kannada news portal

ಅಪರಾಧ ಪ್ರಕರಣಗಳು ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಿ:ಎಸ್.ಆರ್.ಶಿವಮೂರ್ತಿ

1 min read

ಚಿತ್ರದುರ್ಗ ಏ. ೦೨

ಹೆಚ್.ಸಿಯಿಂದ ಎಎಸ್‌ಐ ಬಡ್ತಿಯನ್ನು ಹೊಂದುವ ಸಮಯದಲ್ಲಿ ಕೆಲವೊಂದು ತೊಂದರೆಗಳಿದ್ದು ಅವುಗಳನ್ನು ಸರಿಪಡಿಸಲು ಸರ್ಕಾರಕ್ಕೆ ಒತ್ತಡವನ್ನು ತರುವಂತೆ ನಿವೃತ್ತ ಆರಕ್ಷಕ ಉಪ ನಿರೀಕ್ಷಕರಾದ ಎಸ್.ಆರ್.ಶಿವಮೂರ್ತಿ ಒತ್ತಾಯಿಸಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ ಪೊಲೀಸರು ನಿರಂತರ ಜನಸಂಪರ್ಕದಲ್ಲಿ ಇರಬೇಕು. ಅವರೊಂದಿಗೆ ಉತ್ತಮವಾಗಿ ನಡೆದುಕೊಳ್ಳಬೇಕು. ಯಾವುದೇ ರೀತಿಯ ಅಪರಾಧ ಪ್ರಕರಣಗಳು ನಡೆದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಸ್ಪಂದಿಸಬೇಕು. ಆಗ ಜನರು ಪೊಲೀಸರ ಬಗ್ಗೆ ನಂಬಿಕೆ, ವಿಶ್ವಾಸ ಮೂಡುತ್ತದೆ ಎಂದು ಸಲಹೆ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡಬೇಕು. ಈ ಮೂಲಕ ಪೊಲೀಸರನ್ನು ಒತ್ತಡ ಮುಕ್ತರನ್ನಾಗಿ ಮಾಡಬೇಕು. ಪೊಲೀಸರು ಬಿಡುವಿನ ವೇಳೆ ತಮ್ಮ ಕುಟುಂಬದ ಕಲ್ಯಾಣಕ್ಕೆ ಗಮನ ನೀಡಲು ಅವಕಾಶ ಲಭಿಸುವಂತೆ ಮಾಡಬೇಕು ಎಂದು ಮನವಿ ಮಾಡಿ ಹೆಚ್.ಸಿ.ಯಿಂದ ಎ.ಎಸ್.ಐ. ಬಡ್ತಿಯನ್ನು ಹೊಂದಿದಾಗ ರಜೆ, ಗಳಿಕೆ ರಜೆಯನ್ನು ರದ್ದು ಮಾಡಲಾಗಿದೆ ಇದರಿಂದ ತೊಂದರೆಯಾಗಲಿದೆ ಬಡ್ತಿ ಸಿಗದಿದ್ದರೆ ಚೆನ್ನಾಗಿತ್ತು ಎಂದು ಹೇಳಲಾಗುತ್ತಿದೆ. ಆರ್ಥಿಕವಾಗಿಯೂ ಸಹಾ ಕಡಿಮೆಯಾಗುತ್ತಿದೆ ಇದರ ಬಗೆಗ ಸರ್ಕಾದ ಗಮನ ಸೆಳೆಯುವಂತೆ ಎಂದು ಶಿವಮೂರ್ತಿ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡಿದರು.

ಕೊರೋನಾ ಸಮಯದಲ್ಲಿ ಜಿಲ್ಲಾ ಪೋಲಿಸ್ ಉತ್ತಮವಾದ ಕೆಲಸವನ್ನು ಮಾಡಿದ್ದಾರೆ. ಸರ್ಕಾರ ಲಾಕ್‌ಡೌನ್ ಘೋಷಿಸಿದಾಗ ಜಿಲ್ಲೆಯಲ್ಲಿ ಬೇರೆ ರಾಜ್ಯದ ಕಾರ್ಮಿಕರು ಇಲ್ಲಿ ಬಂದಿದ್ದರು ಅವರನ್ನು ಅವರ ರಾಜ್ಯಕ್ಕೆ ಕಳುಹಿಸುವಲ್ಲಿ ಉತ್ತಮವಾದ ಕಾರ್ಯವನ್ನು ಮಾಡಿದ್ದಾರೆ. ಇದೇ ರೀತಿ ಪೋಲಿಸ್ ಸಿಬ್ಬಂದಿಗೆ ಆರೋಗ್ಯದ ಬಗ್ಗೆಯೂ ಸಹಾ ಕಾಳಜಿಯನ್ನು ವಹಿಸುವುದರ ಮೂಲಕ ಜನತೆಯಲ್ಲಿಯೂ ಸಹಾ ಜಾಗೃತಿಯನ್ನು ಮೂಡಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀಮತಿ ರಾಧಿಕಾರವರ ಕಾರ್ಯವನ್ನು ಶ್ಲಾಘೀಸಿದರು.

ಜಿಲ್ಲಾಧಿಕಾರಿ ಶ್ರೀಮತಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ರಕ್ಷಣಾಧಿಕಾರಿ ಶ್ರೀಮತಿ ರಾಧಿಕಾ, ಹೆಚ್ಚುವರಿ ರಕ್ಷಣಾಧಿಕಾರಿ ಮಹಾಲಿಂಗ ನಂದಗಾವಿ, ಐಮಂಗಲ ಪೋಲಿಸ್ ಪ್ರಾಂಶುಪಾಲರಾದ ಪಾಪಣ್ಣ ಭಾಗವಹಿಸಿದ್ದರು ಇದೇ ಸಂದರ್ಭದಲ್ಲಿ ನಿವೃತ್ತಿ ಹೊಂದಿದ ವಿವಿಧ ರೀತಿಯ ಹುದ್ದೆಗಳ ಸಿಬ್ಬಂದಿ, ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

You may have missed