April 19, 2024

Chitradurga hoysala

Kannada news portal

ಮಹಿಳೆಯರಿಗೆ ಭರ್ಜರಿ ಅವಕಾಶ :ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

1 min read

ಚಿತ್ರದುರ್ಗ,ಏಪ್ರಿಲ್08:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆಯಡಿಯಲ್ಲಿ ಜಿಲ್ಲೆಯ 06 ತಾಲ್ಲೂಕುಗಳೊಳಗೊಂಡಂತೆ ಒಟ್ಟು 164 ಜನ ಗ್ರಾಮ ಕಾಯಕ ಮಿತ್ರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 25 ಕೊನೆಯ ದಿನವಾಗಿದೆ.
ಆಸಕ್ತಿ ಉಳ್ಳವರು ಅರ್ಜಿಯನ್ನು ನಿಗಧಿ ನಮೂನೆಯಲ್ಲಿ  ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಏಪ್ರಿಲ್ 25ರ ರೊಳಗಾಗಿ ಆಯಾ ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು.
ಗ್ರಾಮ ಕಾಯಕ ಮಿತ್ರರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕುಟುಂಬಗಳ ನೊಂದಣಿ, ಕೆಲಸದ ಬೇಡಿಕೆ ಸ್ವೀಕರಿಸುವುದು ಮತ್ತು ಸ್ವೀಕೃತಿ ನೀಡುವುದು, ಕಾಯಕ ಬಂಧುಗಳ ಮೇಲ್ವಿಚಾರಣೆ, ಕಡತ ಮತ್ತು ರಿಜಿಸ್ಟರ್‍ಗಳ ನಿರ್ವಹಣೆ ಇತ್ಯಾದಿ ಕರ್ತವ್ಯಗಳನ್ನು ನಿರ್ವಹಿಸುವ ಮೂಲಕ ಯೊಜನೆಯ ಆಡಳಿತವನ್ನು ಉತ್ತಮಗೊಳಿಸುವಲ್ಲಿ ನೆರವು ನೀಡಬಹುದಾಗಿದೆ.
 2020-21ನೇ ಸಾಲಿನಲ್ಲಿ 20 ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಕಾಯಕ ಮಿತ್ರರನ್ನು ಗೌರವಧನದ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ.
ಆರ್ಹತೆ: ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬೇಕು.   ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು 01.01.2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯಡಿ ಕ್ರಿಯಾ ಶೀಲ ಜಾಬ್ ಕಾರ್ಡ್ ಹೊಂದಿರಬೇಕು. ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20, ಮತ್ತು 2020-21) ಕನಿಷ್ಠ ಎರಡು ವರ್ಷ ಯೋಜನೆಯಡಿ ಅಕುಶಲ ಕೂಲಿಕಾರರಾಗಿ ಕೆಲಸ ನಿರ್ವಹಿಸಿರಬೇಕು. ದಿನಾಂಕ 01.01.21ಕ್ಕೆ ಅನ್ವಯಿಸುವಂತೆ 45 ವರ್ಷ ಮೀರವಾರದು, ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು, ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ  ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.  
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಾರ್ಯಾಲಯದ ನರೇಗಾ ಶಾಖೆ ಅಥವಾ ದೂರವಾಣಿ ಸಂಖ್ಯೆ 08194-229910, 08194-223058ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ನಂದಿನಿ ದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *