April 26, 2024

Chitradurga hoysala

Kannada news portal

ಕೋಟೆನಾಡಿನಲ್ಲಿ ನಗರ ಸಂಚಾರಿ ಗ್ರಂಥಾಲಯ ಶೀಘ್ರ ಪ್ರಾರಂಭ: ತಿಪ್ಪಮ್ಮ ವೆಂಕಟೇಶ್

1 min read


ಚಿತ್ರದುರ್ಗ,ಏಪ್ರಿಲ್09:
ಕೋಟೆನಾಡು ಚಿತ್ರದುರ್ಗದಲ್ಲಿ ಸಾರ್ವಜನಿಕ ಓದುಗರಿಗಾಗಿ ಶೀಘ್ರದಲ್ಲಿಯೇ ನಗರ ಸಂಚಾರಿ ಗ್ರಂಥಾಲಯ ಪ್ರಾರಂಭವಾಗಲಿದೆ ಎಂದು ನಗರ ಸಭೆ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್ ತಿಳಿಸಿದ್ದಾರೆ.
ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿರುವ ಮಕ್ಕಳ ಸಮುದಾಯ ಗ್ರಂಥಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಗ್ರಂಥಾಲಯ ಪ್ರಾಧಿಕಾರದ 24ನೇ ಸಭೆ ಹಾಗೂ 2021-22ನೇ ಸಾಲಿನ ಅಂದಾಜು ಆಯ-ವ್ಯಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದಲ್ಲಿ ಸಂಚಾರಿ ಗ್ರಂಥಾಲಯ ಪ್ರಾರಂಭಿಸಲು ವಾಹನ ಪೂರೈಸುವಂತೆ ಈಗಾಗಲೇ ಕೆಎಸ್‍ಆರ್‍ಟಿಸಿ ಅವರಿಗೆ ಸುವ್ಯವಸ್ಥೆಯಿಂದ ಕೂಡಿದ ಡಿಜಿಟಲ್ ವಾಹನ ನೀಡುವಂತೆ ಡಿಪೋ ವ್ಯವಸ್ಥಾಪಕರ ಮೂಲಕ  ಕೆಎಸ್‍ಆರ್‍ಟಿಸಿ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ ಅವರಿಗೆ ಪತ್ರ ಬರೆಯಲಾಗಿದ್ದು, ಇದಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
  ಬೆಂಗಳೂರು, ಮಂಗಳೂರು, ಶಿವಮೊಗ್ಗ, ದಾವಣಗೆರೆ, ಕಲಬುರ್ಗಿ ಸೇರಿದಂತೆ ರಾಜ್ಯದ 10 ಕಡೆ ಈಗಾಗಲೇ ಸಂಚಾರಿ ಗ್ರಂಥಾಲಯ ಕಾರ್ಯನಿರ್ವಹಿಸುತ್ತಿದ್ದು, ಚಿತ್ರದುರ್ಗದಲ್ಲಿ ಕೆಲವೇ ದಿನಗಳಲ್ಲಿ ಸಂಚಾರಿ ಲೈಬ್ರರಿ ಪ್ರಾರಂಭವಾಗಲಿದೆ. ಸಂಚಾರಿ ಗ್ರಂಥಾಲಯದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಪುಸ್ತಕಗಳ ವ್ಯವಸ್ಥೆ ಮಾಡಲಾಗುತ್ತದೆ. ಸಾರ್ವಜನಿಕ ಓದುಗರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನಗರಸಭೆ ವತಿಯಿಂದ ಕೇಂದ್ರ ಗ್ರಂಥಾಲಯಕ್ಕೆ ಎಲ್ಲಾ ರೀತಿಯ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.
ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಇದುವರೆಗೂ 43,726 ಜನರು ಸದಸ್ಯತ್ವ ಪಡೆದಿದ್ದಾರೆ. ಡಿಜಿಟಲ್ ಗ್ರಂಥಾಲಯದಲ್ಲಿ ಓದುಗರಿಗಾಗಿ 10 ಲಕ್ಷಕ್ಕೂ ಹೆಚ್ಚು ಪುಸ್ತಕಗಳು ಲಭ್ಯವಿದ್ದು, ಓದುಗರು ಇದರ ಸದುಪಯೋಗ ಪಡೆಯಬಹುದು ಎಂದರು
ಜಿಲ್ಲೆಯಲ್ಲಿರುವ ಶಾಲಾ-ಕಾಲೇಜುಗಳಿಗೆ ಗ್ರಂಥಾಲಯ ಸಿಬ್ಬಂದಿ ಭೇಟಿ ನೀಡಿ, ಡಿಜಿಟಲ್ ಗ್ರಂಥಾಲಯ ನೊಂದಣಿ ಬಗ್ಗೆ ಮತ್ತು ಇದರ ಉಪಯೋಗದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಡಿಜಿಟಲ್ ಗ್ರಂಥಾಲಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ನೋಂದಣಿ ಮಾಡಿಸಿಕೊಳ್ಳುವರು ನೇರವಾಗಿ ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ, ಸದಸ್ಯತ್ವ ಪಡೆದುಕೊಳ್ಳಬಹುದು ಎಂದರು.
ನಗರದ ಧವಳಗಿರಿ ಬಡವಾಣೆಯಲ್ಲಿ  ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅನುದಾದಲ್ಲಿ ನಿರ್ಮಾಣಗೊಂಡ ಗ್ರಂಥಾಲಯವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಡಿಜಿಟಲ್ ಗ್ರಂಥಾಲಯ ಹಾಗೂ ಗ್ರಂಥಾಲಯವನ್ನು ತಿಂಗಳೊಳಗಾಗಿ ಪ್ರಾರಂಭಿಸುವುದಾಗಿ ಸಭೆಗೆ ಮಾಹಿತಿ ನೀಡಿದರು.
 ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಹಾಗೂ ಹೆಸರಾಂತ ಲೇಖಕರ ಪುಸ್ತಕಗಳನ್ನು 2021-22ನೇ ಸಾಲಿನ ಗ್ರಂಥಾಲಯ ಪ್ರಾಧಿಕಾರದ ಕೋಟಾದಲ್ಲಿ ಓದುಗರ ಬೇಡಿಕೆ ಅನ್ವಯ, ಪ್ರಸ್ತುತ ವರ್ಷದಲ್ಲಿ ಚಿತ್ರದುರ್ಗ ಜಿಲ್ಲೆಯಿಂದ ಐಎಎಸ್, ಕೆಎಎಸ್, ಪಾಸಾದ ವಿದ್ಯಾರ್ಥಿಗಳಿಂದ ಹಾಗೂ ಜಿಲ್ಲಾಧಿಕಾರಿಗಳ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಸ್ಪರ್ಧಾತ್ಮಕ ಪುಸ್ತಕಗಳ ಪಟ್ಟಿಯನ್ನು ಸ್ವೀಕರಿಸಲಾಗಿದ್ದು,  ಹೆಸರಾಂತ ಪ್ರಕಟಣೆಯ ಪುಸ್ತಕಗಳನ್ನು ಸ್ಪರ್ಧಾತ್ಮಕ ಅಧ್ಯಯನಕೇಂದ್ರ ಹಾಗೂ ಶಾಖಾ ಗ್ರಂಥಾಲಯಗಳಿಗೆ ಪುಸ್ತಕಗಳನ್ನು ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಗರ ಕೇಂದ್ರ ಗ್ರಂಥಾಲಯದ ಆವರಣದಲ್ಲಿ ಓದುಗರಿಗೆ ಹೊರಾಂಗಣ ಓದುವ ಆವರಣ ನಿರ್ಮಾಣಕ್ಕೆ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
 2021-22ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದಲ್ಲಿ ಒಟ್ಟು ರೂ.80 ಲಕ್ಷ ಅಂದಾಜು ಆದಾಯ ನಿರೀಕ್ಷಿಸಲಾಗಿದೆ ಹಾಗೂ ರೂ.77 ಲಕ್ಷ ಅಂದಾಜು ವ್ಯಯ ಆಗುವ ನೀರಿಕ್ಷೆ ಇದೆ ಎಂದು ಸಭೆಗೆ ತಿಳಿಸಿದರು.
ಸಭೆಯಲ್ಲಿ ಹಿರಿಯ ವಕೀಲರಾದ ಕೃಷ್ಣಮೂರ್ತಿ, ಸರ್ಕಾರಿ ಕಲಾ ಕಾಲೇಜು ಗ್ರಂಥಪಾಲಕ ತಿಪ್ಪೇಸ್ವಾಮಿ, ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗ್ರಂಥಪಾಲಕ ಟಿ.ಎನ್.ಪ್ರಸನ್ನ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *