Recent Posts

October 17, 2021

Chitradurga hoysala

Kannada news portal

ಕೋಟೆ ನಾಡಲ್ಲಿ ಕೋವಿಡ್ ಹಾವಳಿ ಹೆಚ್ಚುತ್ತಿದೆ, 85 ಜನರಿಗೆ ಕೋವಿಡ್ ಸೋಂಕು ದೃಢ: 14 ಮಂದಿ ಬಿಡುಗಡೆ

1 min read

ಚಿತ್ರದುರ್ಗ,ಏಪ್ರಿಲ್17:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 85 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 15,731ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 27, ಚಳ್ಳಕೆರೆ 05, ಹಿರಿಯೂರು 32, ಹೊಳಲ್ಕೆರೆ 3, ಹೊಸದುರ್ಗ 3, ಮೊಳಕಾಲ್ಮುರು ತಾಲ್ಲೂಕಿನಲ್ಲಿ 04 ಹಾಗೂ ಹೊರ ಜಿಲ್ಲೆಯ 11 ಪ್ರಕರಣಗಳು ಸೇರಿದಂತೆ ಒಟ್ಟು 85 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ  14 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 2609 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 85 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 15,731ಕ್ಕೆ ಏರಿಕೆಯಾಗಿದೆ. ಇದುವರೆಗೂ ಒಟ್ಟು 70 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 15,403 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 258 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,27,596 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 3,86,767 ಜನರ ಮಾದರಿ ಸಂಗ್ರಹಿಸಲಾಗಿದ್ದು, 3,69,357 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 984 ಜನರ ವರದಿ ಬರುವುದು ಬಾಕಿ ಇದೆ. 695 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed