April 20, 2024

Chitradurga hoysala

Kannada news portal

ಕೋಟೆ ನಾಡಲ್ಲಿ ನಿಯಂತ್ರಣಕ್ಕಿಲ್ಲ ಕೋವಿಡ್. ಜಿಲ್ಲೆಯಲ್ಲಿ 422 ಜನರಿಗೆ ಕೋವಿಡ್ ಸೋಂಕು ದೃಢ: 131 ಮಂದಿ ಬಿಡುಗಡೆ

1 min read

ಚಿತ್ರದುರ್ಗ,ಮೇ.19:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರ ವರದಿಯಲ್ಲಿ 422 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21,995 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 162, ಚಳ್ಳಕೆರೆ 94, ಹಿರಿಯೂರು 71, ಹೊಳಲ್ಕೆರೆ 27, ಹೊಸದುರ್ಗ 26, ಮೊಳಕಾಲ್ಮುರು ತಾಲ್ಲೂಕಿನಲ್ಲಿ 26 ಹೊರ ಜಿಲ್ಲೆಯ 16 ಪ್ರಕರಣ ಸೇರಿದಂತೆ ಒಟ್ಟು 422 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 131 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬುಧವಾರ ಒಟ್ಟು 2047 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 422 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 21,995 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಮೂವರು ಮೃತರಾಗಿದ್ದು ಇದುವರೆಗೆ ಒಟ್ಟು 117 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 18,135 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 3,743 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1,79,910 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,55,853 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,32,206 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 888 ಜನರ ವರದಿ ಬರುವುದು ಬಾಕಿ ಇದೆ. 764 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *