April 24, 2024

Chitradurga hoysala

Kannada news portal

ಕೋವಿಡ್ ಸ್ಫೋಟ: ಜಿಲ್ಲೆಯಲ್ಲಿ 722 ಪಾಸಿಟಿವ್ ಕೇಸ್, 202 ಜನ ಡಿಶ್ಚರ್ಜ್

1 min read

ಚಿತ್ರದುರ್ಗ,ಮೇ.22:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 722 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 24,123 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 305, ಚಳ್ಳಕೆರೆ 75, ಹಿರಿಯೂರು 86, ಹೊಳಲ್ಕೆರೆ 40, ಹೊಸದುರ್ಗ 92, ಮೊಳಕಾಲ್ಮುರು ತಾಲ್ಲೂಕಿನಲ್ಲಿ 35 ಹಾಗೂ ಹೊರ ಜಿಲ್ಲೆಯ 89 ಪ್ರಕರಣಗಳು ಸೇರಿದಂತೆ ಒಟ್ಟು 722 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 202 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 2617 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 722 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 24,123 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಒಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 124 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 18,682 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 5,317 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 193813 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,63,203 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,38,081 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 223 ಜನರ ವರದಿ ಬರುವುದು ಬಾಕಿ ಇದೆ. 776 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

ಕೋವಿಡ್ ರಿಪೋರ್ಟ್..

About The Author

Leave a Reply

Your email address will not be published. Required fields are marked *