March 28, 2024

Chitradurga hoysala

Kannada news portal

ಕೋವಿಡ್ ಕೇರ್ ಸೆಂಟರ್ ಪ್ರಾರಂಭ ಸರ್ಕಾರದ ಮೊದಲ ಆದ್ಯತೆ: ಸಚಿವ ಶ್ರೀರಾಮುಲು

1 min read

ತಮಟಕಲ್ಲು ರಸ್ತೆಯ ಕೋವಿಡ್ ಕೇರ್ ಸೆಂಟರ್‍ಗೆ ಸಚಿವರಾದ ಬಿ.ಶ್ರೀರಾಮುಲು ಭೇಟಿ.
ಚಿತ್ರದುರ್ಗ,ಮೇ.25:
ಕೋವಿಡ್-19 ಸೋಂಕಿತರನ್ನು ಹೋಂ ಐಸೋಲೇಷನ್ ಮಾಡುವುದರಿಂದ ತುಂಬಾ ತೊಂದರೆಯಾಗುತ್ತಿದೆ. ಹಾಗಾಗಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪನೆ ಮಾಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಜಿಲ್ಲೆಯಲ್ಲಿ ಈಗಾಗಲೇ 22 ಕೋವಿಡ್ ಕೇರ್ ಸೆಂಟರ್‍ಗಳನ್ನು ಪ್ರಾರಂಭ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಹೇಳಿದರು.
ನಗರದ ತಮಟಕಲ್ಲು ರಸ್ತೆಯಲ್ಲಿನ ಬಿ.ಸಿ.ಎಂ.ಹಾಸ್ಟೆಲ್‍ನಲ್ಲಿ ಜಿಲ್ಲಾಡಳಿತ ಹಾಗೂ ಪ್ರಕಾಶ್ ಸ್ಪಾಂಜ್ ರವರ ಪ್ರಾಯೋಜಕತ್ವದಲ್ಲಿ ಸುಮಾರು 250 ಬೆಡ್ ಸಾಮಾಥ್ರ್ಯದ ಕೋವಿಡ್ ಕೇರ್ ಸೆಂಟರ್ ಹಾಗೂ 20 ಆಕ್ಸಿಜನ್‍ನೆಟೆಡ್ ಬೆಡ್ ಸೌಲಭ್ಯವಿರುವ ಕೋವಿಡ್ ಕೇರ್ ಸೆಂಟರ್ ಅನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೋವಿಡ್-19 ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 5,600 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ ಕಡಿಮೆ ಇದೆ. ಜಿಲ್ಲಾಡಳಿತ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮಕೈಗೊಂಡಿದ್ದು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಹೇಳಿದರು.
ಕೋವಿಡ್-19 ಸೋಂಕು ಗ್ರಾಮೀಣ ಪ್ರದೇಶಗಳಿಗೂ ಹರಡುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳ ಜನರನ್ನು ಸುರಕ್ಷಿತವಾಗಿ ಕಾಪಾಡುವ ನಿಟ್ಟಿನಲ್ಲಿ ಕೋವಿಡ್ ಸೋಂಕಿನ ಲಕ್ಷಣಗಳಿರುವವರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸಿ, ಪಾಸಿಟಿವ್ ಪ್ರಕರಣಗಳಿಗೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಗುಣ ಪಡಿಸುವ ಕೆಲಸವನ್ನು ಮಾಡಲಾಗುವುದು. ಈ ನಿಟ್ಟಿನಲ್ಲಿ ಎಲ್ಲ ಕಡೆ ಆಕ್ಸಿಜನ್ ಬೆಡ್ ಸೌಲಭ್ಯ ಕಲ್ಪಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
 ಜಿಲ್ಲೆಯ 519 ಹಳ್ಳಿಗಳು ಕೋವಿಡ್ ಸೋಕಿತ ಗ್ರಾಮಗಳಾಗಿದ್ದು ಜನರು ತೊಂದರೆಗೆ ಒಳಗಾಗಿದ್ದು, ಇನ್ನೂ ಮುಂದೆ ಕೋವಿಡ್ ಸೋಂಕು ಹರಡದಂತೆ ನಿಯಂತ್ರಣ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು. ಈ  ನಿಟ್ಟಿನಲ್ಲಿ ಜಿಲ್ಲೆಯ ಜನರು ಅಗತ್ಯ ಸಹಕಾರ ನೀಡಬೇಕು ಮನವಿ ಮಾಡಿದರು.
ಬ್ಲಾಕ್ ಫಂಗಸ್ ಮತ್ತು ವೈಟ್ ಫಂಗಸ್‍ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇದುವರೆಗೂ 27 ಪ್ರಕರಣಗಳು ವರದಿಯಾಗಿವೆ. ಬ್ಲಾಕ್ ಮತ್ತು ವೈಟ್ ಫಂಗಸ್ ಚಿಕಿತ್ಸೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಔಷಧಿಯನ್ನು ಪೂರೈಕೆ ಮಾಡಲಿದೆ. ಹಾಗಾಗಿ ಜಿಲ್ಲೆಯ ಜನರು ಭಯ, ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.
 ಇದಕ್ಕೂ ಮೊದಲು ನಗರದ ಬಿವಿಎಸ್‍ಕೆ ಬಡಾವಣೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ 70 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಸೆಂಟರ್ ಮಾಡಿದ್ದು ಇಲ್ಲಿಗೆ ಭೇಟಿ ನೀಡಿದ ಸಚಿವರು ಪರಿಶೀಲನೆ ನಡೆಸಿದರು.
 ಪ್ರಸ್ತುತ ಇಲ್ಲಿ 68 ಜನರು ದಾಖಲಾಗಿದ್ದು ಈಗಾಗಲೇ ದಾಖಲಾದವರಲ್ಲಿ 37 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇವರಿಗೆ ಊಟ, ವಸತಿ, ಬಿಸಿನೀರು ಹಾಗೂ ಎಲ್ಲಾ ಔಷಧವನ್ನು ಸರ್ಕಾರವೇ ಒದಗಿಸಲಾಗುತ್ತಿದ್ದು ಇವರ ಚಿಕಿತ್ಸೆಗಾಗಿ ಒಬ್ಬರು ವೈದ್ಯರು, ನರ್ಸ್ ಮತ್ತು ಸಿಬ್ಬಂದಿಗಳಿರುವರು ಆದ್ದರಿಂದ ಜನರು ಯಾರು ಆತಂಕಪಡಬಾರದು. ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಪಡೆಯಬೇಕು. ಯಾರಿಗೆ ಮನೆಯಲ್ಲಿ ಪ್ರತ್ಯೇಕ ವ್ಯವಸ್ಥೆ ಇಲ್ಲವೊ ಅವರಿಗಾಗಿ ಕೇರ್ ಸೆಂಟರ್‍ಗಳನ್ನು ತೆರೆಯಲಾಗಿದ್ದು ಜನರು ಇವುಗಳ ಉಪಯೋಗ ಪಡೆದು ತಮ್ಮ ಕುಟುಂಬವನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕೆಂದು ಮನವಿ ಮಾಡಿದ ಅವರು ಕೋವಿಡ್ ಕೇರ್ ಸೆಂಟರ್‍ನಲ್ಲಿದ್ದ ರೋಗಿಗಳ ಯೋಗಕ್ಷೇಮ ವಿಚಾರಿಸಿದರು. ಇಲ್ಲಿ ಮಹಿಳೆಯರು ಇದ್ದು ಇವರನ್ನು ಮಾತನಾಡಿಸಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ; ಪಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *