April 23, 2024

Chitradurga hoysala

Kannada news portal

ಸ್ವಲ್ಪ ಸಮಾಧಾನ:ಜಿಲ್ಲೆಯಲ್ಲಿ 392 ಜನರಿಗೆ ಕೋವಿಡ್ ಸೋಂಕು ದೃಢ: 489 ಮಂದಿ ಬಿಡುಗಡೆ.

1 min read

ಚಿತ್ರದುರ್ಗ,ಮೇ.25:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 392 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 25,421 ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 181, ಚಳ್ಳಕೆರೆ 43, ಹಿರಿಯೂರು 18, ಹೊಳಲ್ಕೆರೆ 52, ಹೊಸದುರ್ಗ 48, ಮೊಳಕಾಲ್ಮುರು ತಾಲ್ಲೂಕಿನಲ್ಲಿ 50 ಸೇರಿದಂತೆ ಒಟ್ಟು 392 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ ಸೋಂಕಿತರುಗಳಿಗಿಂತ ಬಿಡುಗಡೆಯಾದವರು ಹೆಚ್ಚಿದ್ದು 489 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 2537 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 392 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 25,421 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 134 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 19,775 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 5,512 ಸಕ್ರಿಯ ಪ್ರಕರಣಗಳು ಇವೆ.
 ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 224739 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
  ಈವರೆಗೆ 4,69,052 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,42,695 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 149 ಜನರ ವರದಿ ಬರುವುದು ಬಾಕಿ ಇದೆ. 787 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
======= 

About The Author

Leave a Reply

Your email address will not be published. Required fields are marked *