April 19, 2024

Chitradurga hoysala

Kannada news portal

ಕಲಾವಿದರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

1 min read

ಕಲಾವಿದರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
*****
ಚಿತ್ರದುರ್ಗ,ಮೇ.27:
ಪ್ರಸ್ತುತ ರಾಜ್ಯಾದ್ಯಂತ ಕೋವಿಡ್-19ರ ಎರಡನೇ ಅಲೆಯ ಲಾಕ್‍ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3000/-ಗಳ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳು ಮೇ 19ರಂದು ಘೋಷಿಸಿರುತ್ತಾರೆ. ಈ ಘೋಷಣೆಯನ್ವಯ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ತಲಾ ರೂ.3000/-ಗಳ ಆರ್ಥಿಕ ನೆರವನ್ನು ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯಡಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಪ್ರಕಾರದ ಕಲಾವಿದರು ಸೇವಾಸಿಂಧು ಫೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 05 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಕಲಾವಿದರು ವೃತ್ತಿನಿರತರಾಗಿದ್ದು, 35 ವರ್ಷ ಮೇಲ್ಪಟ್ಟವಾಗಿರಬೇಕು ಹಾಗೂ ಕನಿಷ್ಟ 10 ವರ್ಷಗಳ ಕಲಾಸೇವೆ ಮಾಡಿರಬೇಕು (ಕಲಾವಿದರು ಕಲಾಸೇವೆ ಮಾಡಿರುವ ಕನಿಷ್ಟ ಒಂದು ಫೋಟೋ ಲಗತ್ತಿಸುವುದು), ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು ಹಾಗೂ ಯಾವುದೇ ಸರ್ಕಾರಿ ನೌಕರರಾಗಿರಬಾರದು (ರಾಜ್ಯ, ಕೇಂದ್ರ, ನಿಗಮ ಮಂಡಳಿ, ಸರ್ಕಾರಿ ಅನುದಾನಿತ ಸಂಸ್ಥೆಗಳು, ಅರೆ ಸರ್ಕಾರಿ ಸಂಸ್ಥೆಗಳು), 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಸಾಂಸ್ಕøತಿಕ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯ ಪಡೆದ, ವಾದ್ಯ ಪರಿಕರ, ವೇಷಭೂಷಣ ಖರೀದಿ, ಶಿಲ್ಪಕಲೆ, ಚಿತ್ರಕಲಾ ಪ್ರದರ್ಶನಕ್ಕೆ ಧನಸಹಾಯ ಪಡೆದವರು ಈ ಯೋಜನೆಯಡಿ ಅರ್ಜಿ ಸಲ್ಲಿಸುವಂತಿಲ್ಲ. ಈ ವ್ಯಾಪ್ತಿಗೆಒಳಪಡುವ ಕಲಾವಿದರು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಆಧಾರ್ ಸಂಖ್ಯೆ (ಆಧಾರ್ ಕಾರ್ಡ್ ಲಗತ್ತಿಸಿ), ದೂರವಾಣಿ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ (ಬ್ಯಾಂಕ್ ಪಾಸ್ ಪುಸ್ತಕದ ಮೊದಲ ಪುಟ ಲಗತ್ತಿಸಿ) ವಿವರಗಳನ್ನೊಳಗೊಂಡ ಅರ್ಜಿಯನ್ನು ಜಿಲ್ಲೆಯಲ್ಲಿರುವ ಎಲ್ಲ ನಾಗರಿಕ ಸೇವಾ ಕೇಂದ್ರಗಳು ಅಥವಾ ಮೊಬೈಲ್ ಮೂಲಕ ಆನ್‍ಲೈನ್‍ನಲ್ಲಿ ಸೇವಾಸಿಂಧು ಪೋರ್ಟಲ್‍ನಲ್ಲಿಯೇ ಕಡ್ಡಾಯವಾಗಿ ಭರ್ತಿ ಮಾಡುವುದು,
ಭರ್ತಿ ಮಾಡಿದ ಅರ್ಜಿಗಳನ್ನು ಮೇ 28ರ ಬೆಳಿಗ್ಗೆ 10 ಗಂಟೆಯಿಂದ ಜೂನ್ 5ರೊಳಗೆ ಸಲ್ಲಿಸಲು ತಿಳಿಸಲಾಗಿದೆ.
ಕೋವಿಡ್-19ರ 2ನೇ ಅಲೆಯ ಪ್ರಯುಕ್ತ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ತಲಾ ರೂ.3,000/-ಗಳ ಸಹಾಯಧನ ಪಾವತಿಗೆ ಸೇವಾಸಿಂಧುನಡಿ ಅರ್ಜಿ ಸಲ್ಲಿಸಲು ಹೆಲ್ಪ್‍ಲೈನ್ ಸ್ಥಾಪಿಸಲಾಗಿದೆ. ಚಿತ್ರದುರ್ಗ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯಪ್ಪ ಅವರ ಸಂಪರ್ಕ ಸಂಖ್ಯೆ-9480841217 ಹಾಗೂ ಕಚೇರಿ ಸಿಬ್ಬಂದಿ ಉಷಾದೇವಿ ಅವರ ಸಂಪರ್ಕ ಸಂಖ್ಯೆ-9481476917 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ಧನಂಜಯಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *