April 27, 2024

Chitradurga hoysala

Kannada news portal

ಜಿಲ್ಲೆಯಲ್ಲಿ ಕೋವಿಡ್ ಬ್ಲಾಸ್ಟ್ :ಭಾನುವಾರದ ಹೆಲ್ತ್ ಬುಲೆಟಿನ್, ಜಿಲ್ಲೆಯಲ್ಲಿ ಕೋವಿಡ್ ಮಹಾ ಸ್ಫೋಟ, 805 ಸೋಂಕು ದೃಢ, ಎರಡು ಸಾವು.

1 min read

ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ಹೆಲ್ತ್ ಬುಲೆಟಿನ್ ವರದಿಯಲ್ಲಿ 805 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28,619ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 223, ಚಳ್ಳಕೆರೆ 129, ಹಿರಿಯೂರು 150, ಹೊಳಲ್ಕೆರೆ 74, ಹೊಸದುರ್ಗ 167, ಮೊಳಕಾಲ್ಮುರು ತಾಲ್ಲೂಕಿನ 62 ಪ್ರಕರಣಗಳು ಸೇರಿದಂತೆ ಒಟ್ಟು 805 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 523 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಭಾನುವಾರ ಒಟ್ಟು 2393 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 805 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 28,619 ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಇಬ್ಬರು ಮೃತರಾಗಿದ್ದು ಇದುವರೆಗೆ ಒಟ್ಟು 143 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 21,626 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 6,850 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 2,72,923 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 4,81,126 ಜನರ ಮಾದರಿ ಸಂಗ್ರಹಿಸಲಾಗಿದ್ದು, 4,51,641 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 60 ಜನರ ವರದಿ ಬರುವುದು ಬಾಕಿ ಇದೆ. 806 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *