April 20, 2024

Chitradurga hoysala

Kannada news portal

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಚಿತ್ರದುರ್ಗನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.

1 min read

ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ
ಚಿತ್ರದುರ್ಗ,ಜೂನ್27:
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿಯನ್ನು ಸರಳವಾಗಿ ಆಯೋಜಿಸಲಾಗಿತ್ತು. ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಸೇರಿದಂತೆ ಸಮಾಜದ ಮುಖಂಡರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ, ದೇಶದ ಸಿಲಿಕಾನ್ ಸಿಟಿ, ಉದ್ಯಾನನಗರಿ ಎಂದು ಗುರುತಿಸಿಕೊಂಡಿರುವ ಬೆಂಗಳೂರನ್ನು ಕಟ್ಟುವಲ್ಲಿ ನಾಡಪ್ರಭು ಕೆಂಪೇಗೌಡರ ಶ್ರಮ ಹಾಗೂ ತ್ಯಾಗ ಅಪಾರವಾಗಿದೆ ಎಂದರು.
ಕೆಂಪೇಗೌಡರು ಬೆಂಗಳೂರು ನಿರ್ಮಾತೃ ಮಾತ್ರವಲ್ಲದೆ ದೂರದೃಷ್ಠಿ, ಕನಸುಗಾರಿಕೆ, ಜಾತ್ಯಾತೀತ ಮನೋಭಾವ, ಧರ್ಮ ಸಹಿಷ್ಣುತೆ ಮತ್ತು ಪ್ರಜಾವಾತ್ಸಲ್ಯದಂತಹ ಅಪರೂಪದ ಗುಣಗಳಿಂದಾಗಿ ಇಂದಿಗೂ ಸ್ಮರಣೀರಾಗಿದ್ದಾರೆ ಎಂದರು.
ಕೆಂಪೇಗೌಡರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲಾಗುತ್ತಿದ್ದು, ಕೆಂಪೇಗೌಡರ ತತ್ವಬ ಮತ್ತು ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯಬೇಕು. ಇಂತಹ ಮಹಾನ್ ನಾಯಕರ ನಿಷ್ಠೆ, ಪ್ರಮಾಣಿಕತೆಯನ್ನು ಯುವ ಜನತೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಹನುಮಂತಪ್ಪ, ಕಾರ್ಯದರ್ಶಿ ಜಗನ್ನಾಥ್, ಗುನ್ನಯ್ಯ, ಶಿಕ್ಷಕ ಚಿದಾನಂದ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ ಉಪಸ್ಥಿತರಿದ್ದರು.: ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಸೇರಿದಂತೆ ಸಮಾಜದ ಮುಖಂಡರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ವಾರ್ತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಧನಂಜಯ ಸೇರಿದಂತೆ ಸಮಾಜದ ಮುಖಂಡರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಣೆ ಮಾಡಿದರು.

About The Author

Leave a Reply

Your email address will not be published. Required fields are marked *