1998 ರಲ್ಲಿ ಗೃಹ ಮಂಡಳಿ ಅಧ್ಯಕ್ಷ ನಾಗಿದ್ದವರನು ಇಂದು ನಿಗಮ ಮಂಡಳಿ ನೀಡಿ ಅವಮಾನ ಮಾಡಿದ್ದಾರೆ.
1 min readಚಿತ್ರದುರ್ಗ, ಜುಲೈ 27: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಒಂದು ವರ್ಷದ ಸಂಭ್ರಮಾಚರಣೆಯಲ್ಲಿ ಇಂದು ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮತ್ತು ಚಿತ್ರದುರ್ಗ ಶಾಸಕ ಜಿ.ಎಚ್ ತಿಪ್ಪಾರೆಡ್ಡಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಆದರೆ ಹಿರಿಯ ಶಾಸಕ ತಿಪ್ಪಾರೆಡ್ಡಿ ಮಾತನಾಡಿ, ನನಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ, ನನ್ನ ನಿರೀಕ್ಷೆಯೇ ಬೇರೆ ಇತ್ತು. ದೇವರಾಜ ಅರಸ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು.
ಅವಮಾನ ಮಾಡಲೆಂದೇ ಈ ಸ್ಥಾನ ನೀಡಲಾಗಿದೆ. ಇದು ನನಗೆ ನೋವಿನ ಸಂಗತಿ ಎಂದು ಸಿಎಂ ಯಡಿಯೂರಪ್ಪ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾತನಾಡಲು ಸಾಧ್ಯವಾಗಿಲ್ಲ, ಅವರಿಗೆ ನೂರಾರು ಸಮಸ್ಯೆಗಳಿವೆ ಎಂದರು.