April 29, 2024

Chitradurga hoysala

Kannada news portal

ಸೆಮಿನಾರ್, ತರಬೇತಿಗೆ ಸೂಚನೆ ಸಂಸದ ನಾರಾಯಣಸ್ವಾಮಿ*

1 min read

*ಸೆಮಿನಾರ್, ತರಬೇತಿಗೆ ಸೂಚನೆ ಸಂಸದ ನಾರಾಯಣಸ್ವಾಮಿ*
ಚಿತ್ರದುರ್ಗ : ಕೋವಿಡ್-19 ಮೂರನೇ ಅಲೆಯ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸೋಂಕಿತ ಮಕ್ಕಳಿಗೆ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಎನ್ನುವುದರ ಕುರಿತು ತಜ್ಞರಿಂದ ಸೆಮಿನಾರ್ ಹಾಗೂ ತರಬೇತಿ ನೀಡುವಂತೆ ಸಂಸದರು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿಗೆ ತರಬೇತಿ ನೀಡಲು ಇಂದಿರಾ ಗಾಂಧಿ ಮಕ್ಕಳ ತರಬೇತಿ ಸಂಸ್ಥೆಯೊಂದಿಗೆ ಚರ್ಚಿಸಲಾಗಿದ್ದು, ಸಿಬ್ಬಂದಿಗೆ ತರಬೇತಿ ನೀಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ತಾಲ್ಲೂಕುವಾರು ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೆಮಿನಾರ್ ಹಾಗೂ ತರಬೇತಿ ನೀಡಬೇಕು. ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಆಪರೇಟಿಂಗ್ ಹಾಗೂ ಆಕ್ಸಿಜನ್ ಬಳಕೆ ಕುರಿತು ತರಬೇತಿ ನೀಡಬೇಕು ಎಂದು ಸಂಸದರು ತಿಳಿಸಿದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಆರ್.ರಂಗನಾಥ್ ಅವರನ್ನು ಚಿತ್ರದುರ್ಗ ಡಿ.ಹೆಚ್.ಒ ಹುದ್ದೆಗೆ ನಿಯೋಜನೆಗೊಳಿಸಲಾಗಿದೆ

ಸಭೆಯಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ, ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *