Recent Posts

October 16, 2021

Chitradurga hoysala

Kannada news portal

*ಡೆಂಗ್ಯೂ ವಿರೋಧಿ ಮಾಸಾಚರಣೆ*

1 min read

*ಡೆಂಗ್ಯೂ ವಿರೋಧಿ ಮಾಸಾಚರಣೆ* .                          (ನೀರಿನಲ್ಲಿರುವ ಹುಳು/ಲಾರ್ವ, ಸೊಳ್ಳೆ ಮರಿ, ಸೊಳ್ಳೆಗಳ ನಿಯಂತ್ರಿಸುವುದೇ ಡೆಂಗ್ಯೂ,ಚಿಕನ್ ಗುನ್ಯಾ,ಮತ್ತಿತರ ಮಾರಕ ಸಾಂಕ್ರಾಮಿಕ ರೋಗಗಳನ್ನು ತಡೆಯುವ ವಿಧಾನ ಎಂದ ತಾಲ್ಲೂಕು ಅರೋಗ್ಯ ಅಧಿಕಾರಿ ಬಿ.ವಿ. ಗಿರೀಶ್) _________________                                ಚಿತ್ರದುರ್ಗ:
ನೀರಿನಲ್ಲಿ ಇರುವ ಹುಳುಗಳು (ಲಾರ್ವ) ಸೊಳ್ಳೆ ಮರಿಗಳು, ಸೊಳ್ಳೆಗಳ ನಿಯಂತ್ರಣ ಮಾಡುವುದು ಒಂದೇ ಡೆಂಗ್ಯೂ, ಚಿಕನ್ ಗುನ್ಯಾದತಂಹ ಮಾರಕ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸ ಬಹುದಾದ ವಿಧಾನ . ಈಡಿಸ್ ಈಜಿಪ್ಟೈ ಎಂಬ ಸೊಂಕಿತ ಹೆಣ್ಣು ಸೊಳ್ಳೆಯ ಕಚ್ಚುವಿಕೆಯಿಂದ ಡೆಂಗ್ಯೂ ಜ್ವರ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡಿ, ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚಿ ಡೆಂಗ್ಯೂ ಜ್ವರ ಹರಡಲು ಕಾರಣವಾಗುತ್ತವೆ, ಎಂದು ತಾಲ್ಲೂಕು ಅರೋಗ್ಯ ಅಧಿಕಾರಿ ಬಿ.ವಿ. ಗಿರೀಶ್ ಹೇಳಿದರು.
ಅವರು ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಪ್ರಾಥಮಿಕ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಡೆಂಗ್ಯೂ ವಿರೋಧಿ ಮಾಸಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾಗವಹಿಸಿ ಮಾತನಾಡಿದರು.
ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಾಲ್ಲೂಕು ಕ್ಷೇತ್ರ ಶಿಕ್ಷಾಧಿಕಾರಿಗಳಾದ ಮಂಜುನಾಥ ಅವರು ಡೆಂಗ್ಯೂ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ, ತ್ರೀವ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ, ಮಾಂಸಖಂಡ ಮತ್ತು ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳಿವುದು ಈ ರೋಗದ ಪ್ರಮುಖ ಲಕ್ಷಣಗಳಾಗಿವೆ, ಅದ್ದರಿಂದ ಡೆಂಗ್ಯೂ ರೋಗ ಲಕ್ಷಣಗಳು ಕಂಡ ತಕ್ಷಣ ಹತ್ತಿರದ ಅರೋಗ್ಯ ಕೇಂದ್ರ, ಸರಕಾರಿ ಆಸ್ಪತ್ರೆಯ ವೈದ್ಯರಿಂದ ರೋಗದ ಲಕ್ಷಣಗಳನುಸಾರವಾಗಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದರು.
ಬೆಳಗಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರದ ಅರೋಗ್ಯ ನೀರಿಕ್ಷಣಾಧಿಕಾರಿಗಳಾದ ಮಹೇಶ್ ಅವರು ಡೆಂಗ್ಯೂ ಜ್ವರ ನಿಯಂತ್ರಣಕ್ಕೆ ಎಲ್ಲಾ ನೀರಿನ ತೊಟ್ಟಿ, ಡ್ರಮ್, ಬ್ಯಾರಲ್, ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ನೀರನ್ನು ಭರ್ತಿ ಮಾಡಿ,ಸೊಳ್ಳೆಗಳು ಒಳಗೆ ನುಸುಳದಂತೆ ಸರಿಯಾದ ಮುಚ್ಚಳ ಅಥವಾ ಬಟ್ಟೆಗಳಿಂದ ಮುಚ್ಚುವುದು, ಬಯಲಿನಲ್ಲಿರುವ ತಾಜ್ಯ ವಸ್ತುಗಳಾದ ಟೈರ್, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದ ಘನ ತಾಜ್ಯ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ, ಸೂಕ್ತ ಸ್ಥಳಗಳಲ್ಲಿ ವಿಲೇವಾರಿ ಮಾಡಿಸುವ ಮೂಲಕ ಈ ರೀತಿಯ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಡೆಂಗ್ಯೂ ಚಿಕನ್ ಗುನ್ಯಾದಂತಹ ಮಾರಕ ಸಾಂಕ್ರಾಮಿಕ ರೋಗಗಳನ್ನು ಬರದಂತೆ ತಡೆಗಟ್ಟಬಹುದು‌ ಎಂದು ಹೇಳಿದರು.
ಈ ಸಮಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೂಗಪ್ಪ, ಫಾರ್ಮ್ಸಸಿ ಅಧಿಕಾರಿ ಶಶಿಧರ್, ಪ್ರಾಥಮಿಕ ಆರೋಗ್ಯ ಸುರಕ್ಷಾಣಾಧಿಕಾರಿ ನಿರ್ಮಲಾ, ಸಮುದಾಯ ಅರೋಗ್ಯ ಅಧಿಕಾರಿ ಭಾರತಮ್ಮ, ಅಶಾ ಕಾರ್ಯಕರ್ತೆಯರು, ಗ್ರಾಮಸ್ಥರು, ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You may have missed