April 27, 2024

Chitradurga hoysala

Kannada news portal

*ರಾಜ್ಯ ಸರ್ಕಾರ ತೊಗಲಕ್ ಆಡಳಿತ ನಡೆಸುತ್ತಿದೆ: ಸಲೀಮ್ ಅಹಮದ್*

1 min read

*ರಾಜ್ಯ ಸರ್ಕಾರ ತೊಗಲಕ್ ಆಡಳಿತ ನಡೆಸುತ್ತಿದೆ: ಸಲೀಮ್ ಅಹಮದ್*

ಚಿತ್ರದುರ್ಗ :
ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಅಡುಗೆ ಎಣ್ಣೆ, ತೈಲ ದರ ಏರಿಸಿರುವುದರಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರು ಬದುಕಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾಕ್ಕಿಂತಲೂ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಆದರೆ, ರಾಜ್ಯ, ಕೇಂದ್ರ ಸರ್ಕಾರ ಅದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ’ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮದ್ ಆರೋಪಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಧಿಕಾರ ನಡೆಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು, ರಾಜ್ಯ ಸರ್ಕಾರ ತೊಗಲಕ್ ಆಡಳಿತ ನಡೆಸುತ್ತಿದೆ. ಈ ರೀತಿ ಬಿಜೆಪಿ ಪಕ್ಷದ ಮುಖಂಡರೆ ಮುಖ್ಯಮಂತ್ರಿಗಳ ಮೇಲೆ ಹೇಳುತ್ತಿದ್ದಾರೆ. ಇದು ಸರ್ಕಾರದ ಕಾರ್ಯವೈಖರಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.

ದೇಶದ ಪ್ರಧಾನಿ ಮತ್ತು ರಾಜ್ಯದ ಮುಖ್ಯಮಂತ್ರಿಗಳು ಚುನಾವಣೆ ಪೂರ್ವದಲ್ಲಿ ಜನರಿಗೆ ಸ್ವರ್ಗ ತೋರಿಸುತ್ತೇವೆ ಎಂದು ಹೇಳಿ ಇದೀಗ ನರಕ ತೋರಿಸುತ್ತಿದ್ದಾರೆ ಕೋರೋನಾ ರೋಗದಿಂದ ಸುಮಾರು ೩ ಲಕ್ಷ ಜನ ಮೃತಪಟ್ಟಿದ್ದಾರೆ ಎಂದು ವೆಬ್ಸೆöಟ್ ವೊಂದು ವರದಿ ನೀಡಿದೆ. ಆದರೆ ರಾಜ್ಯ ಸರ್ಕಾರ ೩೦ ಸಾವಿರ ಮಾತ್ರ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ವರದಿ ನೀಡುತ್ತಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ೩೬ ಜನ ಮೃತಪಟ್ಟಿದ್ದು, ಈ ಮರಣವನ್ನು ರಾಜ್ಯ ಸರ್ಕಾರ ನೆಡೆಸಿದ ಕೊಲೆ ಪ್ರಕರಣ ಎಂದು ನಾವು ಪರಿಗಣಿಸುತ್ತೇವೆ ಎಂದರು.

ಪಾರ್ಲಿಮೆಂಟ್ ನಿಂದ ಗ್ರಾಮಪಂಚಾಯಿತಿ ವರಿಗೆ ಸಹಾಯ ಹಸ್ತ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ನಡೆಸುತ್ತಿದೆ. ಕೋವಿಡ್ ಭಾಧಿತ ಕುಟುಂಬಗಳನ್ನು ಭೇಟಿ ಮಾಡುವ ಉದ್ದೇಶದಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೧೦ ಜನರ ಕರೋನಾ ವಾರಿಯರ್ ನೇಮಕ ಮಾಡುತ್ತೇವೆ ಎಂದು ಹೇಳಿದರು.

ಅಧಿಕಾರ ಮತ್ತು ಹಣಕ್ಕಾಗಿ ನಮ್ಮ ಪಕ್ಷದ ಕೆಲವು ಶಾಸಕರು ಮಾತೃ ಪಕ್ಷಕ್ಕೆ ದ್ರೋಹ ಮಾಡಿ ಹೋಗಿದ್ದಾರೆ. ಆದರೂ ಕೂಡ ೨೦೨೩ ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೂ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ ಅವರು, ಸದ್ಯ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ನಾವು ಹೆಚ್ಚಿನ ಒತ್ತುಕೊಟ್ಟು ಕೆಲಸ ಮಾಡಲಿದ್ದೇವೆ ಎಂದರು.

‘ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ ಸೇರಿದಂತೆ ಇತರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ಜನರನ್ನು ಸಂಕಷ್ಟಕ್ಕೆ ತಳ್ಳಿದ್ದು, ಸರ್ಕಾರದ ಜನವಿರೋಧಿ ಧೋರಣೆ ಖಂಡಿಸಿ ಬುಧವಾರ (ಜು.೭) ನಗರದಲ್ಲಿ ಬೈಸಿಕಲ್ ಜಾಥಾ ನಡೆಸಲು ತೀರ್ಮಾನಿಸಲಾಗಿದೆ’ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಘುಮೂರ್ತಿ, ಮಾಜಿ ಸಚಿವ ಆಂಜನೇಯ, ಮಾಜಿ ಶಾಸಕ ಎಸ್ ತಿಪ್ಪೇಸ್ವಾಮಿ, ಉಮಾಪತಿ, ಬಿಜಿ ಗೋವಿಂದಪ್ಪ, ಪಕ್ಷದ ಜಿಲ್ಲಾಧ್ಯಕ್ಷ ಎಂ.ಕೆ. ತಾಜ್‌ಪೀರ್ ಕಾರ್ಯಾಧ್ಯಕ್ಷ ಹಾಲೇಶ್, ಜಿ.ಎಸ್.ಮಂಜುನಾಥ್, ಯೋಗಿಶ್, ಸಂಪತ್, ಉಲ್ಲಾಸ್, ಮಹಿಳಾ ಘಟಕದ ಶ್ರೀಮತಿ ನಂದಿನಿಗೌಡ, ಮೀನಾಕ್ಷಿ, ವಿಜಯಕುಮಾರ್, ಸೇರಿದಂತೆ ಇತರರು ಹಾಜರಿದ್ದರು.
—————————-
*

About The Author

Leave a Reply

Your email address will not be published. Required fields are marked *