April 28, 2024

Chitradurga hoysala

Kannada news portal

*ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್ ಸೋಂಕು ದೃಢ: 27 ಮಂದಿ ಬಿಡುಗಡೆ*

1 min read

*ಜಿಲ್ಲೆಯಲ್ಲಿ 4 ಜನರಿಗೆ ಕೋವಿಡ್ ಸೋಂಕು ದೃಢ: 27 ಮಂದಿ ಬಿಡುಗಡೆ*

ಚಿತ್ರದುರ್ಗ :
ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 4 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35,463ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 3, ಹಿರಿಯೂರು 1 ಪ್ರಕರಣ ಸೇರಿದಂತೆ ಒಟ್ಟು 4 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 27 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 2965 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 4 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 35,463ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 183 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 34,727 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 553 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 285012 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 6,12,584 ಜನರ ಮಾದರಿ ಸಂಗ್ರಹಿಸಲಾಗಿದ್ದು, 5,73,968 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 2287 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್ ತಿಳಿಸಿದ್ದಾರೆ.
=======

About The Author

Leave a Reply

Your email address will not be published. Required fields are marked *