March 29, 2024

Chitradurga hoysala

Kannada news portal

ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಸೋಂಕು, ಇಂದು ಸೋಂಕಿಗೆ ಒಬ್ಬರು ಬಲಿ: ಸಾವಿನ ಸಂಖ್ಯೆ 186ಕ್ಕೆ ಏರಿಕೆ…

1 min read

ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಸೋಂಕು, ಇಂದು ಸೋಂಕಿಗೆ ಒಬ್ಬರು ಬಲಿ: ಸಾವಿನ ಸಂಖ್ಯೆ 186ಕ್ಕೆ ಏರಿಕೆ…

ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 29 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35,590ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 12, ಚಳ್ಳಕೆರೆ 4 ಹಿರಿಯೂರು 7, ಹೊಳಲ್ಕೆರೆ 3, ಹೊಸದುರ್ಗ 2, ಮೊಳಕಾಲ್ಮೂರು 1 ಪ್ರಕರಣಗಳು ಸೇರಿದಂತೆ ಒಟ್ಟು 29 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 24 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 1554 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 29 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 35,590ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇಂದು ಓರ್ವ ಬಲಿಯಾಗಿದ್ದು ಇದುವರೆಗೆ ಒಟ್ಟು 186 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 34,900 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 504 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,88,333 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 6,31,919 ಜನರ ಮಾದರಿ ಸಂಗ್ರಹಿಸಲಾಗಿದ್ದು, 5,94,072 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1391 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *