April 26, 2024

Chitradurga hoysala

Kannada news portal

ಪ್ರತಾಪ್ ಜೋಗಿ ಜಿ.ಪ. ಅಭ್ಯರ್ಥಿ!

1 min read
ಪ್ರತಾಪ್ ಜೋಗಿ ಜಿ.ಪ. ಅಭ್ಯರ್ಥಿ!

*ಪ್ರತಾಪ್ ಜೋಗಿ ಜಿ.ಪ. ಅಭ್ಯರ್ಥಿ!*
(ಡಿ.ಎಸ್.ಹಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರಕ್ಕೆ
ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷರಿಗೆ ಟಿಕೆಟ್ ಘೋಷಿಸಿದ ತೆನೆ ಪಕ್ಷ) _________________
ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಚುನಾವಣೆಗೆ ಡಿ.ಎಸ್.ಹಳ್ಳಿ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯಾರ್ಥಿಯಾಗಿ ವಕೀಲ, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಪ್ರತಾಪ್ ಜೋಗಿ ಅವರ ಹೆಸರು ಅಂತಿಮಗೊಳಿಸುವಂತೆ ಮಾಜಿ ಮುಖ್ಯಮಂತ್ರಿಗಳು ಎಚ್.ಡಿ.ಕುಮಾರಸ್ವಾಮಿಯವರನ್ನು ಬೇಟಿಯಾದಾಗ ಜಿಲ್ಲಾ ಘಟಕಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಪ್ರತಾಪ್ ಜೋಗಿ ಬಗ್ಗೆ ನನಗೂ ಮಾಹಿತಿ ಇದ್ದು, ಜಿಲ್ಲೆಯಲ್ಲಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಜನರ ಸೇವೆಯಲ್ಲೂ ನಿರಂತರವಾಗಿ ತೊಡಗಿಸಿಕೊಂಡಿದ್ದು, ಪಕ್ಷಕ್ಕೆ ಇಂತಹ ಯುವಕರ ಅಗತ್ಯವಿದೆ ಎಂದಿರುವ ಹೆಚ್ಡಿಕೆ ಯವರಿಗೆ ಇದೇ
ಸಂದರ್ಭದಲ್ಲಿಯೇ ಚಿತ್ರದುರ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ್‍ ರವರು ಸಹ ಮಾಜಿ ಮುಖ್ಯಮಂತ್ರಿಗಳಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ವಿಚಾರವಾಗಿ ಮತ್ತು ವಕೀಲರಾಗಿ ಉತ್ತಮವಾದಂತಹ ಕೆಲಸ ನಿರ್ವಹಿಸಿದ್ದಾರೆ. ಇಂತಹ ಯುವಕರಿಗೆ ನಮ್ಮ ಬೆಂಬಲವಿದ್ದು ನೊಂದವರ ಪರವಾಗಿ ಧ್ವನಿ ಎತ್ತಿ ಬಡವರ ಬಂಧುವಾಗಿದ್ದು, ಪಕ್ಷ ಸಂಘಟನೆಯಲ್ಲೂ ಮುಂಚೂಣಿ ಯಲ್ಲಿರುವ ಪ್ರತಾಪ್ ಜೋಗಿಗೆ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಟಿಕೆಟ್ ನೀಡುವುದರಿಂದ ಜಿಲ್ಲೆಯಲ್ಲಿ ಯುವಕರ ಪಡೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮತ್ತು ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿರವರು ಸುಮಾರು ವರ್ಷಗಳಿಂದ ಪಕ್ಷ ಸಂಘಟನೆ ಜೊತೆ ಜೊತೆಯಲ್ಲಿಯೇ ಸ್ಥಳೀಯ ಸಂಸ್ಥೆಗಳಿಂದ ವಿಧಾನಸಭೆ ಮತ್ತು ವಿಧಾನಪರಿಷತ್ ಚುನಾವಣೆಗಳಲ್ಲಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ.
ಈ ಸಂದರ್ಭದಲ್ಲಿ ಡಿ.ಎಸ್.ಹಳ್ಳಿ ಕ್ಷೇತ್ರಕ್ಕೆ ಪ್ರತಾಪ್ ಜೋಗಿ ಹೆಸರು ಅಂತಿಮಗೊಳಿಸುವಂತೆ ಸೂಚನೆ ನೀಡಿದ್ದಾರೆ ಎಂದು ಯುವ ಘಟಕದ ಅಧ್ಯಕ್ಷ ಪ್ರತಾಪ್ ಜೋಗಿ ತಿಳಿಸಿದ್ದಾರೆ.
. ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ಎಲ್ಲ ಕ್ಷೇತ್ರಗಳಿಗೂ ಉತ್ತಮ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಳ್ಳುವ ಹೊಣೆ ನಮ್ಮ ಮೇಲಿದೆ. ಜಿಲ್ಲೆಯಲ್ಲಿ ಡಿ.ಎಸ್.ಹಳ್ಳಿ ಕ್ಷೇತ್ರಕ್ಕೆ ಮೊದಲು ಟಿಕೆಟ್ ಘೋಷಣೆ ಮಾಡಿದ್ದು, ಪ್ರತಾಪ್ ಜೋಗಿ ಅವರು ಕ್ಷೇತ್ರದಲ್ಲಿ ಓಡಾಡಿಕೊಂಡು ಇರುವಂತೆ ಮಾಜಿ ಮುಖ್ಯಮಂತ್ರಿಗಳು ಎಚ್.ಡಿ.ಕುಮಾರಸ್ವಾಮಿ ಮತ್ತು ಜಿಲ್ಲಾಧ್ಯಕ್ಷರಾದ ಡಿ.ಯಶೋಧರವರು ತಿಳಿಸಿರುವುದು ನನಗೆ ಅದರಲ್ಲೂ ಯುವಕರಿಗೆ ಆಧ್ಯತೆ ನೀಡಿರುವುದು ಹರ್ಷದ ವಿಚಾರ.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರು ತಿಮ್ಮಣ್ಣ, ಹಿರಿಯೂರು ತಾಲ್ಲೂಕಿನ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಜಯಣ್ಣ, ಜೆಡಿಎಸ್ ಕಾನೂನು ವಿಭಾಗದ ಅಧ್ಯಕ್ಷರು ಶಿವಶಂಕರ್, ವಕ್ತಾರರಾದ ಗೋಪಾಲಸ್ವಾನಿ ನಾಯ್ಕ್, ಮಂಜಣ್ಣ, ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅನಿಲ್ ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *