April 25, 2024

Chitradurga hoysala

Kannada news portal

ಯಡಿಯೂರಪ್ಪ ನಾಯಕತ್ವದಲ್ಲಿ ಸುಭದ್ರ ಸರ್ಕಾರ.

1 min read

ಬೆಂಗಳೂರು, ಜು. 27: ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ನಿನ್ನೆಗೆ ಒಂದು ವರ್ಷವಾಗಿದೆ. ಇವತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಮಾತನಾಡಿದ್ದಾರೆ. ಕೊರೊನಾವೈರಸ್ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಇದೇ ಸಂದರ್ಭದಲ್ಲಿ ಕೊಪ್ಪಳದಲ್ಲಿ ಮಾತನಾಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು, ಬಿ.ಎಸ್. ಯಡಿಯೂರಪ್ಪ ಅವರೇ ಮುಂದಿನ‌ ದಿನಗಳಲ್ಲಿಯೂ ಕೂಡ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಅವರ ನಾಯಕತ್ವದಲ್ಲಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸುಭದ್ರವಾಗಿದೆ ಹೇಳಿದ್ದಾರೆ

About The Author

Leave a Reply

Your email address will not be published. Required fields are marked *