Recent Posts

October 16, 2021

Chitradurga hoysala

Kannada news portal

ಕಾಂಗ್ರೆಸ್ ದಲಿತರಿಗೇನು ಮಾಡಿದೆ: ಕಟೀಲ್‍

1 min read

ಕಾಂಗ್ರೆಸ್ ದಲಿತರಿಗೇನು ಮಾಡಿದೆ: ಕಟೀಲ್‍
__________________________________
ಚಿತ್ರದುರ್ಗ ●ಬಿಜೆಪಿ ದಲಿತರಿಗೆ ನೀಡಿದಷ್ಟು ಅವಕಾಶವನ್ನು ಕಾಂಗ್ರೆಸ್ ನವರು ನೀಡಿಲ್ಲ. ದಲಿತರಾದ ಕೋವಿಂದ್ ರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ. ದಲಿತರಾದ ಗೋವಿಂದ್ ಕಾರಜೋಳರನ್ನು ಉಪಮುಖ್ಯಮಂತ್ರಿ ಮಾಡಿದ್ದು ಬಿಜೆಪಿ. ಆನೇಕಲ್ ಎ.ನಾರಾಯಣಸ್ವಾಮಿಗೆ ಕೇಂದ್ರದಲ್ಲಿ ಮಂತ್ರಿ ಮಾಡಿದ್ದು ಬಿಜೆಪಿ, ಕಾಂಗ್ರೆಸ್ ದಲಿತರಿಗೆ ಏನು ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದರು.ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ತಾಕತ್ತಿದ್ದರೆ ದಲಿತ ಸಿಎಂ ಮಾಡಲಿ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಹೀಗೆ ತಿರುಗೇಟು ನೀಡಿದರು.ದಲಿತರು ಅμÉ್ಟೀ ಏಕೆ ಮುಸ್ಲಿಂ ಸಮುದಾಯದ ಅಬ್ದುಲ್ ಕಲಾಂ ರನ್ನು ಬಿಜೆಪಿ ರಾಷ್ಟ್ರಪತಿ ಮಾಡಿದ್ದು ಬಿಜೆಪಿ ಅಲ್ಲವೇ, ಈ ಸತ್ಯವನ್ನು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅರಿಯಬೇಕು. ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸುವ ಮೂಲಕ ಅತಿ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಮೊದಲ ಸಚಿವ ಸಂಪುಟದಲ್ಲಿ ನೋವಾಗಿ ಅಂಬೇಡ್ಕರ್ ರಾಜೀನಾಮೆ ನೀಡಿದ್ದರು.

ಲೋಕಸಭೆ ಚುನಾವಣೆಗೆ ನಿಂತಾಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತು. ಎರಡನೇ ಬಾರಿಯೂ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಸೋಲಿಸಿತು. ಅಂಬೇಡ್ಕರ್ ಅಂತ್ಯ ಸಂಸ್ಕಾರಕ್ಕೂ ಜಾಗ ಕೊಡಲಿಲ್ಲ. ಭಾರತ ರತ್ನವನ್ನು ಕೊಡಲಿಲ್ಲ, ಇದು ಕಾಂಗ್ರೆಸ್ ದಲಿತರಿಗೆ ಮಾಡಿದ ದೊಡ್ಡ ಮೋಸ ಎಂದು ಕಿಡಿ ಕಾರಿದರು.ಕಾಂಗ್ರೆಸ್ ಪಕ್ಷ ಅಂಬೇಡ್ಕರ್ ಅವರನ್ನು ಸಂಪೂರ್ಣ ಮೂಲೆ ಗುಂಪು ಮಾಡಿತು. ಆದರೆ ಬಿಜೆಪಿ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಟ್ಟಿತು. ಪ್ರಧಾನಮಂತ್ರಿಗೆ ಅರ್ಹತೆ ಹೊಂದಿದ್ದ ಜಗಜೀವನ್ ರಾಮ್ ರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಲಿಲ್ಲ ಜೊತೆಗೆ ಚುನಾವಣೆಯಲ್ಲಿ ಸೋಲಿಸಿದರು. ಅμÉ್ಟೀ ಏಕೆ ಸಿದ್ದರಾಮಯ್ಯನವರೇ ಡಾ.ಜಿ.ಪರಮೇಶ್ವರ್ ಅವರನ್ನು ಸೋಲಿಸಿದ್ದು ತಾವಲ್ಲವೇ ಎಂದು ಪ್ರಶ್ನಿಸಿ ಗರಂ ಆದರು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಕಡಿಮೆ ಸಮಯ ಅಧಿಕಾರ ನಡೆಸಿದೆ. ಆದರೆ ಕಾಂಗ್ರೆಸ್ ಅಧಿಕಾರ ನಡೆಸಿದ್ದು ಎಷ್ಟು ವರ್ಷ ಎಂದು ಸಿದ್ಧರಾಮಯ್ಯನವರನ್ನು ಕುಟಿಕ ಕಟೀಲ್, ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಂದು ಜೆಡಿಎಸ್ ಪಕ್ಷಕ್ಕೆ ಏನು ಮಾಡಿದರು ನಿಮ್ಮ ಇತಿಹಾಸ ಗೊತ್ತಿಲ್ಲವೇ ಈ ರಾಜ್ಯದ ಜನತೆಗೆ ಎಂದು ಕಟೀಲ್ ತಿರುಗೇಟು ನೀಡಿದರು.ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರ ಸರ್ಕಾರ ಮಾಡಿದಷ್ಟು ಭ್ರμÁ್ಟಚಾರವನ್ನು ಯಾವ ಮುಖ್ಯಮಂತ್ರಿಯೂ ಮಾಡಲು ಸಾಧ್ಯವಿಲ್ಲ. ಸಿದ್ಧರಾಮಯ್ಯನವರು ಅರ್ಕಾವತಿ ಘಟನೆ ಮುಚ್ಚಿ ಹಾಕಿದ್ದಾರೆ ಎಂದು ಆರೋಪಿಸಿದರು. 17 ಮಂದಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿದ್ದಾರೆ ಎಂದರು. ರಾಷ್ಟ್ರೀಯ ನಾಯಕರ ಸೂಚನೆ ಪಾಲಿಸುವುದಾಗಿ ಸಿಎಂ ಹೇಳಿದ್ದಾರೆ. ಸಿಎಂ ಈಗಾಗಲೇ ನೆರೆ ವೀಕ್ಷಣೆ, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಗಮನಿಸಿ ಹೇಳುತ್ತಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ್, ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಕೆಎಸ್‍ಆರ್‍ರ್ಟಿಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

You may have missed