Recent Posts

October 17, 2021

Chitradurga hoysala

Kannada news portal

ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಸೋಂಕು 012 ಮಂದಿ ಬಿಡುಗಡೆ

1 min read

ಜಿಲ್ಲೆಯಲ್ಲಿ ಮತ್ತೆ ಏರಿಕೆಯಾದ ಕೋವಿಡ್ ಸೋಂಕು 012 ಮಂದಿ ಬಿಡುಗಡೆ…

ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 012 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 35,639ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 4, ಚಳ್ಳಕೆರೆ 2 ಹಿರಿಯೂರು 2, ಹೊಸದುರ್ಗ 3,ಮೊಳಕಾಲ್ಮೂರು 1 ಪ್ರಕರಣಗಳು ಸೇರಿದಂತೆ ಒಟ್ಟು 12 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 012 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 1173 ಜನರ ಗಂಟಲು,ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.ವರದಿಯಲ್ಲಿ 12 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 35,639ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 186 ಜನ ಮೃತಪಟ್ಟಿದ್ದಾರೆ.ಸೋಂಕಿತರ ಪೈಕಿ ಈಗಾಗಲೆ 34,988 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು,ಜಿಲ್ಲೆಯಲ್ಲಿ ಸದ್ಯ453 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,90,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 6,41,453 ಜನರ ಮಾದರಿ ಸಂಗ್ರಹಿಸಲಾಗಿದ್ದು, 6,04,225 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 723 ಜನರ ವರದಿ ಬರುವುದು ಬಾಕಿ ಇದೆ.866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed