May 6, 2024

Chitradurga hoysala

Kannada news portal

ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿ _(ಮುಖ್ಯಮಂತ್ರಿ ಮಗ ಮುಖ್ಯಮಂತ್ರಿಯಾಗಿ ಆಯ್ಕೆ)

1 min read

ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿ _________________(ಮುಖ್ಯಮಂತ್ರಿ ಮಗ ಮುಖ್ಯಮಂತ್ರಿಯಾಗಿ ಆಯ್ಕೆ) ________________ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶಿಗ್ಗಾವಿ ಶಾಸಕ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ.

ಮಂಗಳವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಬುಧವಾರ ಬೆಳಗ್ಗೆ ೧೧-೦೦ ಕ್ಕೆ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನೇಮಿಸಿದ್ದ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ, ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರನ್ನು ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸುವ ಮೂಲಕ ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಅವರ ಮಗನಾದ ಬಸವರಾಜ ಬೊಮ್ಮಾಯಿ ಜನತಾ ಪರಿವಾರದಿಂದ ರಾಜಕಾರಣ ಆರಂಭಿಸಿ ಬಿಜೆಪಿಗೆ ಬಂದವರು. ಎರಡು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದ ಬೊಮ್ಮಾಯಿ, ಮೂರು ಬಾರಿ ಶಿಗ್ಗಾವಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ.

*ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ* _________________ ಉತ್ತರ ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ಮಾಜಿ ಮುಖ್ಯಮಂತ್ರಿ ಎಸ್ ಆರ್ ಬೊಮ್ಮಾಯಿ ಯವರ ಮಗ ಬಸವರಾಜ್ ಬೊಮ್ಮಾಯಿ ಕರ್ನಾಟಕದ ಮೂವತ್ತನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.ಹಾಗೆ ನೋಡಿದರೆ ಮುಖ್ಯಮಂತ್ರಿಯ ಮಗ ಮುಖ್ಯಮಂತ್ರಿಯಾಗುವುದು ಬಹಳ ವಿರಳ. ಅಪರೂಪದ ಸನ್ನಿವೇಶದಲ್ಲಿ ಕರ್ನಾಟಕದ ರಾಜಕಾರಣ ಇತಿಹಾಸದಲ್ಲಿ ಎಚ್ ಡಿ ದೇವೇಗೌಡರ ಕುಟುಂಬ ಹೊರತುಪಡಿಸಿ ಈಗ ಬೊಮ್ಮಾಯಿ ಕುಟುಂಬ ಆ ವಿಶೇಷ ಮನ್ನಣೆಗೆ ಪಾತ್ರವಾಗುತ್ತಿದೆ.

About The Author

Leave a Reply

Your email address will not be published. Required fields are marked *