April 24, 2024

Chitradurga hoysala

Kannada news portal

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಿದರೆ ಸಮಾಜದ ಕಟ್ಟಕಡೆಯ ಪ್ರಜೆಗೂ ಸರ್ಕಾರದ ಸೌಲತ್ತುಗಳು ಸಮರ್ಪಕವಾಗಿ ತಲುಪುತ್ತವೆ : ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ

1 min read

ಸಮಾಜದ ಕಟ್ಟಕಡೆಯ ಪ್ರಜೆಗೂ ಸರ್ಕಾರದ ಸೌಲಭ್ಯ
ತಳಕು ಗ್ರಾಮದಲ್ಲಿ ಮನೆ ಬಾಗಿಲಿಗೆ ತಾಲ್ಲೂಕು ಆಡಳಿತ ಕಾರ್ಯಕ್ರಮ
ಚಳ್ಳಕೆರೆ: ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ಕಾರ್ಯನಿರ್ವಹಿಸಿದ್ದೇಯಾದರೆ ಸಮಾಜದ ಕಟ್ಟಕಡೆಯ ಪ್ರಜೆಗೂ ಕೂಡ ಸರ್ಕಾರದ ಸೌಲತ್ತುಗಳು ಸಮರ್ಪಕವಾಗಿ ತಲುಪುತ್ತವೆ ಎಂದು ಉಪವಿಭಾಗಾಧಿಕಾರಿ ಆರ್. ಚಂದ್ರಯ್ಯ ಹೇಳಿದರು.

ತಾಲೂಕಿನ ತಳುಕು ಗ್ರಾಮದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಮನೆ ಬಾಗಿಲಿಗೆ ತಾಲ್ಲೂಕು ಆಡಳಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪ್ರತಿ ವರ್ಷವು ಹಲವಾರು ಯೋಜನೆಗಳು ಜಾರಿಯಾಗುತ್ತಿವೆ. ಈ ಯೋಜನೆಗಗಳು ಸಾರ್ವಜನಿಕರಿಗೆ ತಲುಪಬೇಕಾದೆರೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರದಿಂದ ಜಾರಿಯಾಗುವ ಯಾವುದೇ ಸೌಲಭ್ಯಗಳನ್ನು ಬೇಕಾದರೂ ಕೂಡ ಸಮಾಜ ಕಟ್ಟಕಡೇ ವ್ಯಕ್ತಿಗೂ ತಪಿಸಬಹುದು ಎಂದು ತಿಳಿಸಿದರು.

ಸರ್ಕಾರದಿಂದ ವೃದ್ಯಾಪಿ ವೇತನ, ಅಂಗವಿಕಲರ ವೇತನ, ಅಂಗವಿಕಲರ ವೇತನ ಲಭ್ಯ ಇರುತ್ತವೆ, ಈ ವೇತನಗಳು ಪಡೆಯದೆ ವಂಚಿತರಾಗಿರುವಂತವರು ಇಂದು ತಾಲ್ಲೂಕು ಮಟ್ಟದ ಅಧಿಕಾರಿಗಳು ನಿಮ್ಮ ಗ್ರಾಮಕ್ಕೆ ಬಂದಿದ್ದಾರೆ, ಸ್ಥಳದಲ್ಲಿಯೇ ನಿಮ್ಮ ಸಮಸ್ಯೆಗಳನ್ನೆ ಆಲಿಸಲಿದ್ದು, ಸಾರ್ವಜನಿಕರು ನಿಮ್ಮ ಸಮಸ್ಯೆಗಳನ್ನು ಅಧಿಕಾರಿಗಳಿಂದ ಬಗೆಹರಿಸಿಕೊಳ್ಳಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.
ತಾಲ್ಲೂಕು ಮಟ್ಟದ ಅಧಿಕಾರಿಗಳೆ ಸರ್ಕಾರದ ಸೌಲತ್ತುಗಳನ್ನು ಪ್ರತಿಯೊಬ್ಬರಿಗೆ ತಲುಪಿಸುವಂತಹ ಮನೆ ಬಾಗಿಲಿಗೆ ತಾಲ್ಲೂಕು ಆಡಳಿತ ಎನ್ನುವ ಕಾರ್ಯಕ್ರಮ ಇಂದು ತಳಕು ಗ್ರಾಮದಲ್ಲಿ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮದಿಂದ ತಾಲ್ಲೂಕು ಆಡಳಿತವೆ ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆ ಬಗೆಹರಿಸಲಿದೆ, ಇಂದು ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸುವಂತ ಕಾರ್ಯವನ್ನು ತಾಲ್ಲೂಕು ಅಧಿಕಾರಿಗಳು ಮಾಡುತ್ತಿದ್ದಾರೆ. ಈ ರೀತಿ ಅಧಿಕಾರಿಗಳು ಕೆಲಸ ನಿರ್ವಹಿಸಿದರೆ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಸಾರ್ವಜನಿಕರಿಗೆ ಲಭ್ಯವಾಗುತ್ತವೆ ಎಂದು ಹೇಳಿದರು.

ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ ಸರ್ಕಾರದ ಹಲವು ಕಾರ್ಯಕ್ರಮಗಳು ಜನರಿಗೆ ಸಮರ್ಪವಾಗಿ ತಲುಪಿಸಬೇಕು, ಸರ್ಕಾರದ ಸೌಲಭ್ಯಗಳಿಂದ ಯಾರು ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ತಾಲ್ಲೂಕಿನಲ್ಲಿ ತಾಲ್ಲೂಕು ಆಡಳಿತ ಮನೆಬಾಗಿಲಿಗೆ ಎನ್ನುವಂತಹ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಸರ್ಕಾರದ ಯಾವುದೇ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವಂತದ್ದು, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವಂತಹ ಕಾರ್ಯ ತಾಲ್ಲೂಕು ಆಡಳಿತದ ಅಧಿಕಾರಿಗಳು ಮಾಡಬೇಕಾಗುತ್ತದೆ. ಆದ್ದರಿದ ತಳಕು ಗ್ರಾಮದಲ್ಲಿ ಸುಮಾರು 20 ವರ್ಷಗಳಿಂದ ಪೌತಿ ಖಾತೆಗಳು ಬದಲಾವಣೆಯಾಗದೆ ಇರುವಂತವು ಕೂಡ ಇಂದು ಬೆಳಿಗೆ ಬಂದಿವೆ, ಇಂತಹ ಖಾತೆಗಳನ್ನು ಅವರ ವಾರಸುದಾರರಿಗೆ ಬದಲಾವಣೆ ಮಾಡಲಾಗುವುದು ಎಂದು ಹೇಳಿದ ಅವರು ಪಿಂಚಣಿಗೆ ಸಂಬಂಧಿಸಿದಂತೆ 9 ಅರ್ಜಿಗಳನ್ನು ಸ್ವಿಕರಿಸಲಾಗಿದೆ. ಈ ಅರ್ಜಿಗಳಿಗೆ ಸಂಭಂದಿಸಿದಂತೆ ದಾಖಲೆಗಳನ್ನು ಪಡೆದು ಒಂದು ವಾರದೊಳಗೆ ಇತರ್ಥ ಮಾಡಲಾಗುವುದು ಎಂದು ಭರವಸೆ ನೀಡಿದರು.ಇನ್ನು ಗ್ರಾಮದಲ್ಲಿ ರಾಜುಕಾಲು ಒತ್ತುವರಿ, ಸ್ಮಶಾನ ಜಾಗದ ಒತ್ತವರಿಯನ್ನು ವೀಕ್ಷಿಸಿ ಒತ್ತುವರಿ ಮಾಡಿಕೊಂಡಿರುವ ಜಾಗವನ್ನು ತೆರವುಗೊಳಿಸಿ ಸಾರ್ವಜನಿಕರ ಅನುಕೂಲಕ್ಕೆ ಅನುವು ಮಾಡಿಕೊಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಹಶೀಲ್ದಾರ್ ಸೂಚನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ರೂಪ, ತೋಟಗಾರಿಕೆ ಅಧಿಕಾರಿ ಆರ್.ವಿರೂಪಾಕ್ಷಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿ ಪ್ರೇಮಸುಧಾ, ತಾಲ್ಲೂಕು ಪಂಚಾಯಿತಿ ಎಡಿಎ ಸಂತೋಷಕುಮಾರ್, ಸಿಡಿಪಿಓ ಮೊಹನ್ ಕುಮಾರಿ, ಗ್ರಾಮಪಂಚಾಯಿತಿ ಅಧ್ಯಕ್ಷೆ ಗಿರಿಜಮ್ಮ, ಆರ್‍ಐ ರಫಿಸಾಬ್ ಸೇರಿದಂತೆ ಇತರೆ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *