Recent Posts

October 17, 2021

Chitradurga hoysala

Kannada news portal

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ನ್ಯಾಯಾಲಯದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 14 ರಂದು ಮೆಗಾ ಲೋಕ ಆದಾಲತ್ ನ್ಯಾಯಧೀಶರಾದ ಮನಗೂಳಿ ಪ್ರೇಮಾವತಿ.ಎಂ

1 min read

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ನ್ಯಾಯಾಲಯದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 14 ರಂದು ಮೆಗಾ ಲೋಕ ಆದಾಲತ್ ನ್ಯಾಯಧೀಶರಾದ ಮನಗೂಳಿ ಪ್ರೇಮಾವತಿ.ಎಂ

ಆಗಸ್ಟ್ 14 ರಂದು ಮೆಗಾ ಲೋಕ ಆದಾಲತ್; ಆಸಕ್ತ ಕಕ್ಷಿದಾರರು ಭಾಗವಹಿಸಲು ಮನವಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಸಂಯುಕ್ತಾಶ್ರಯದಲ್ಲಿ ಇದೇ ಆಗಸ್ಟ್ 14 ರಂದು ಮೆಗಾ ಲೋಕ ಆದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಮನಗೂಳಿ ಪ್ರೇಮಾವತಿ.ಎಂ ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಜಿಲ್ಲೆಯ ನ್ಯಾಯಾಲಯದಲ್ಲಿ 36570 ಪ್ರಕರಣಗಳು ಬಾಕಿ ಇದ್ದು, ಅವುಗಳಲ್ಲಿ 5725 ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಳಿಸಲು ಉದ್ದೇಶಿಸಲಾಗಿದೆ.
ಅದಾಲತ್‍ನಲ್ಲಿ ಇತ್ಯರ್ಥಪಡಿಸುವ ಪ್ರಕರಣಗಳು: ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು. ಚೆಕ್ಕು ಅಮಾನ್ಯದ ಪ್ರಕರಣಗಳು ಯು/ಎಸ್ 138. ಬ್ಯಾಂಕ್ ಪ್ರಕರಣಗಳು. ಮೋಟಾರು ಅಪಘಾತ ಪರಿಹಾರ ನ್ಯಾಯಧಿಕರಣ ಪ್ರಕರಣಗಳು. ಉದ್ಯೋಗದಲ್ಲಿ ಪುನರ್‍ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು. ವಿದ್ಯುತ್ ಹಾಗೂ ನೀರಿನ ಶುಲ್ಕಗಳು(ಓoಟಿ ಅomಠಿouಟಿಜಚಿbಟe ಹೊರತುಪಡಿಸಿ) ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು. ಭೂ ಸ್ವಾಧೀನ ಪ್ರಕರಣಗಳು. ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳಲ್ಲಿ ಬಾಕಿ ಇರುವ ಪ್ರಕರಣಗಳು. ಕಂದಾಯ ಪ್ರಕರಣಗಳು. ಸಿವಿಲ್ ಪ್ರಕರಣಗಳು(ಬಾಡಿಗೆ, ಅನುಭೋಗದ ಹಕ್ಕುಗಳು ನಿರ್ಬಂಧಾಜ್ಞೆ ಮೊಕದ್ದಮೆಗಳು). ಈ ಪ್ರಕರಣಕ್ಕೆ ಸಂಬಂಧಪಟ್ಟಂತಹ ಕಕ್ಷಿದಾರರು ಮೆಗಾ ಲೋಕ ಆದಾಲತ್‍ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಲೋಕ ಆದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯಾರ್ಥಪಡಿಸಲು ಇಚ್ಚಿಸಿದ್ದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲ್ಲೂಕು ಕಾನೂನು ಸೇವಾ ಸಮಿತಿಗೆ ಆನ್‍ಲೈನ್, ವೀಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್‍ಎಮ್‍ಎಸ್, ವ್ಯಾಟ್ಸ್‍ಆಪ್, ಎಲೆಕ್ಟ್ರಾನಿಕ್ ಮೋಡ್, ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದೂರವಾಣಿ ಸಂಖ್ಯೆ-08194-222322 – 9449684954 ಗೆ ಸಂಪರ್ಕಿಸಬಹುದು. ವ್ಯಾಜ್ಯಗಳನ್ನು ಇತ್ಯರ್ಥ ಮಾಡಿಕೊಳ್ಳಲು ತಮ್ಮ ವಕೀಲರ ಮೂಲಕವಾಗಲಿ, ಖುದ್ದು ತಿಳಿಸಿ ಅಂದು ಭೌತಿಕವಾಗಿ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ವರ್ಚುಯಲ್ ವೇದಿಕೆ ಮೂಲಕ ಹಾಜರಾಗಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ. ಇಲ್ಲಿ ಇತ್ಯರ್ಥವಾಗುವ ಎಲ್ಲಾ ಪ್ರಕರಣಗಳಿಗೂ ಕೋರ್ಟ್ ಮಾನ್ಯತೆ ಇರುತ್ತದೆ. ಅವರು ಕಟ್ಟಿದ ಕೋರ್ಟ್ ಶುಲ್ಕವನ್ನು ವಾಪಸ್ ನೀಡಲಾಗುತ್ತದೆಯಲ್ಲದೆ ಸಮಯವು ಉಳಿತಾಯವಾಗಿ ಸಕಾಲದಲ್ಲಿ ನ್ಯಾಯ ದೊರೆಯುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಗಿರೀಶ್ ಬಿ.ಕೆ, ವಕೀಲರ ಸಂಘದ ಅಧ್ಯಕ್ಷರಾದ ಶಿವು ಯಾದವ್, ಪ್ರಧಾನ ಕಾರ್ಯದರ್ಶಿ ಎಂ.ಮೂರ್ತಿ,ಕೋರ್ಟ್ ಮ್ಯಾನೇಜರ್ ದೋನಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed