May 4, 2024

Chitradurga hoysala

Kannada news portal

ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 18 ಕೊನೆಯ ದಿನವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು

1 min read


ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 18 ಕೊನೆಯ ದಿನವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ.

ಚಿತ್ರದುರ್ಗ:
2021-22ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 18 ಕೊನೆಯ ದಿನವಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ನಿರ್ದೇಶನಾಲಯದಿಂದ 2021-22 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2020ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿರುತ್ತದೆ.
ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಅರ್ಜಿಯನ್ನು ಪಡೆದು ಎಲ್ಲಾ ದಾಖಲೆಗಳನ್ನು ಲಗತ್ತಿಸಿ ಅಂತಿಮ ದಿನಾಂಕದೊಳಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸತಕ್ಕದ್ದು. ಕೊನೆಯ ದಿನಾಂಕದ ನಂತರ ಬರುವ ಅರ್ಜಿಗಳನ್ನು ಪ್ರೋತ್ಸಾಹಧನಕ್ಕೆ ಪರಿಗಣಿಸುವುದಿಲ್ಲವೆಂದು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *