April 25, 2024

Chitradurga hoysala

Kannada news portal

ಶುಕ್ರವಾರ 5 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,321ಕ್ಕೆ ಏರಿಕೆಯಾಗಿದೆ.

1 min read


ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 5 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,321ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 2, ಚಳ್ಳಕೆರೆ 1, ಹಿರಿಯೂರು 0 ಹೊಸದುರ್ಗ 0, ಹೊಳಲ್ಕೆರೆ 2, ಮೊಳಕಾಲ್ಮೂರು 0 ಪ್ರಕರಣಗಳು ಸೇರಿದಂತೆ ಒಟ್ಟು 5 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶುಕ್ರವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶುಕ್ರವಾರ ಒಟ್ಟು 3363 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 5 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 36,321ಕ್ಕೆ ಏರಿಕೆಯಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 203 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,321 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 235 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,353 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 7,31,459 ಜನರ ಮಾದರಿ ಸಂಗ್ರಹಿಸಲಾಗಿದ್ದು, 6,91,529 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 2743 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *