March 29, 2024

Chitradurga hoysala

Kannada news portal

ಇಂದು ಶನಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೆ ಏರಿಕೆ…. ಎಚ್ಚರಿಕೆ…???

1 min read

ಇಂದು ಶನಿವಾರ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಮತ್ತೆ ಏರಿಕೆ…. ಎಚ್ಚರಿಕೆ…???

ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 15 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,336ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 6, ಚಳ್ಳಕೆರೆ 2, ಹಿರಿಯೂರು 3 ಹೊಸದುರ್ಗ 1, ಹೊಳಲ್ಕೆರೆ 1, ಮೊಳಕಾಲ್ಮೂರು 2 ಪ್ರಕರಣಗಳು ಸೇರಿದಂತೆ ಒಟ್ಟು 15 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್ಗೆಟ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಶನಿವಾರ 15 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಶನಿವಾರ ಒಟ್ಟು 3035 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 15 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 36,321ಕ್ಕೆ ಏರಿಕೆಯಾಗಿದೆ. ಕೋವಿಡ್ನಿಂ್ದ ಇದುವರೆಗೆ ಒಟ್ಟು 203 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,336 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 237 ಸಕ್ರಿಯ ಪ್ರಕರಣಗಳು ಇವೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,400 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 7,34,494 ಜನರ ಮಾದರಿ ಸಂಗ್ರಹಿಸಲಾಗಿದ್ದು, 6,95,314 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1978 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾಯ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *