April 25, 2024

Chitradurga hoysala

Kannada news portal

ಬಿಜೆಪಿ ಆಡಳಿತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲಾ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾನಂದಿನಿ ಗೌಡ….

1 min read

ಬಿಜೆಪಿ ಆಡಳಿತದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯೇ ಇಲ್ಲಾ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾನಂದಿನಿ ಗೌಡ….

ಚಿತ್ರದುರ್ಗ ●ಕಳೆದ ಐದು ದಿನಗಳ ಹಿಂದೆ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಕಾಮುಕರನ್ನು ಬಂಧಿಸಿ ಉಗ್ರ ಶಿಕ್ಷೆಗೊಳಪಡಿಸುವಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಶನಿವಾರ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.ರಾತ್ರಿ ಏಳು ಗಂಟೆಯ ನಂತರ ಮಹಿಳೆಯರು ಹೊರಗೆ ಓಡಾಡಬಾರದೆಂಬ ಅಸಂಬದ್ದ ಹೇಳಿಕೆ ನೀಡಿರುವ ರಾಜ್ಯ ಗೃಹ ಮಂತ್ರಿ ಆರಗ ಜ್ಞಾನೇಂದ್ರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವಸಗಿರುವವರನ್ನು ಕೂಡಲೆ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡುವುದರ ಬದಲು ಕಾಂಗ್ರೆಸ್‍ನವರು ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆಂಬ ಅಸಹಾಯಕ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಗೃಹ ಸಚಿವರಿಗೆ ಅನುಭವ ಮತ್ತು ಜ್ಞಾನವಿಲ್ಲವೆಂಬುದು ಗೊತ್ತಾಗುತ್ತದೆ ಎಂದು ಪ್ರತಿಭಟನಾನಿರತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ.ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲಲ್ಲಿ ಅಪ್ರಾಪ್ತ ಬಾಲಕಿಯರನ್ನು ರೇಪ್ ಅಂಡ್ ಮರ್ಡರ್ ಮಾಡಲಾಗುತ್ತಿದೆ. ಮಹಿಳೆಯರು ಸುರಕ್ಷಿತವಾಗಿ ಓಡಾಡುವಂತಿಲ್ಲ ಎನ್ನುವುದಕ್ಕೆ ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರವೇ ಸಾಕ್ಷಿ. ರಾಜ್ಯ ಮತ್ತು ಕೇಂದ್ರ ಸರ್ಕಾರ ಇಂತಹ ಅಮಾನವೀಯ ಘಟನೆಗಳನ್ನು ತಡೆಯುವಲ್ಲಿ ಮುಂದಾಗಬೇಕೆಂದು ಪ್ರತಿಭಟನಾನಿರತ ಮಹಿಳೆಯರು ಆಗ್ರಹಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಕಾರ್ಯದರ್ಶಿ ಮೋಕ್ಷರುದ್ರಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ನಜ್ಮತಾಜ್, ಆರತಿ ಮಹಡಿಶಿವಮೂರ್ತಿ, ಜ್ಯೋತಿಲಕ್ಷ್ಮಿ, ನಾಜೀಮ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಡಿ.ಎನ್.ಮೈಲಾರಪ್ಪ, ಕೆ.ಪಿ.ಸಂಪತ್‍ಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಿಕಾಂತ್, ಅಸಂಘಟಿತ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಮೋಹನ್ ಪೂಜಾರಿ, ಜಿ.ಮನೋಹರ್, ಇಂಟೆಕ್ ಜಿಲ್ಲಾಧ್ಯಕ್ಷ ಅಶೋಕ್‍ನಾಯ್ಡು, ವಸೀಂ ಬಡಾಮಕಾನ್, ಕಾಂಗ್ರೆಸ್ ಮುಖಂಡ ಯತೀಶ್ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

About The Author

Leave a Reply

Your email address will not be published. Required fields are marked *