April 23, 2024

Chitradurga hoysala

Kannada news portal

ಕೀಟ ಜನ್ಯ ರೋಗಗಳ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಡಾ. ಬಿ.ವಿ. ಗಿರೀಶ್ ಕೀಟ ಜನ್ಯ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ

1 min read

ಕೀಟ ಜನ್ಯ ರೋಗಗಳ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಡಾ. ಬಿ.ವಿ. ಗಿರೀಶ್
ಕೀಟ ಜನ್ಯ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
____________________________________

ಚಿತ್ರದುರ್ಗ,ಆಗಸ್ಟ್30:
ಕೀಟ ಜನ್ಯ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಸೊಳ್ಳೆ ದಿನ ಕೀಟ ಜನ್ಯ ರೋಗಗಳ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮನೆಯ ಎಲ್ಲಾ ನೀರಿನ ತೊಟ್ಟಿ, ಡ್ರಮ್, ಬ್ಯಾರಲ್, ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳುವುದು. ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ರೋಗ ಬಾರದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳವುದು ಅತ್ಯುತ್ತಮ ಎಂದರು.
ಚಿಕ್ಕಗೊಂಡನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ಅವರು ಜೀವನ ಚಕ್ರ ಬಗ್ಗೆ ಜೈವಿಕ ವಿಧಾನದಲ್ಲಿ ಸೊಳ್ಳೆಗಳ ನಿಯಂತ್ರಣದ ಬಗ್ಗೆ ತಿಳಿಸಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್. ಮಂಜುನಾಥ್ ಕೀಟಗಳಿಂದ ಹರಡುವ ಡೆಂಗ್ಯೂ, ಚಿಕುಂಗುನ್ಯಾ ರೋಗಗಳ ಬಗ್ಗೆ ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಕೀಟ ಜನ್ಯ ರೋಗಗಳ ಮುಂಜಾಗ್ರತಾ ಕ್ರಮದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮಾರುತಿ ಪ್ರಸಾದ್, ಶಂಕರ್, ನಾಗರಾಜ್, ಸಮುದಾಯ ಆರೋಗ್ಯಾಧಿಕಾರಿಗಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

About The Author

Leave a Reply

Your email address will not be published. Required fields are marked *