May 2, 2024

Chitradurga hoysala

Kannada news portal

ಜನಾಶೀರ್ವಾದ ಯಾತ್ರೆಯಲ್ಲಾ ರಾಜ್ಯದ ಜನರ ಕ್ಷಮೆ ಯಾಚಿಸುವ ಯಾತ್ರೆ ಮಾಡಬೇಕಿತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್.

1 min read

ಜನಾಶೀರ್ವಾದ ಯಾತ್ರೆಯಲ್ಲಾ ರಾಜ್ಯದ ಜನರ ಕ್ಷಮೆ ಯಾಚಿಸುವ ಯಾತ್ರೆ ಮಾಡಬೇಕಿತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್.

ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ಸಂಪೂರ್ಣ ವಿಫಲವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಜನರ ಮನೆಮನೆಗೆ ತಲುಪಿಸುವಂತಹ ಕೆಲಸ ಮಾಡಬೇಕು ಮಾಜಿ ಸಚಿವ ಆಂಜನೇಯ

ಹಿರಿಯೂರು:
ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರಗಳೆರಡು ಕೋವಿಡ್ ನಿರ್ವಹಣೆಯಲ್ಲಿ ಎಡವಿದ್ದು, ರಾಜ್ಯದ ಜನತೆ ಕೋವಿಡ್ ಸಂದರ್ಭದಲ್ಲಿ ತೀವ್ರ ಸಂಕಷ್ಟ ಅನುಭವಿಸುವಂತಾಯಿತು, ಯಾವ ಪುರುಷಾರ್ತಕ್ಕಾಗಿ ಇವರು ಸಾವಿರಾರು ಜನರನ್ನು ಸೇರಿಸಿಕೊಂಡು ಜನಾಶೀರ್ವಾದ ಯಾತ್ರೆ ಮಾಡಿದರು. ಇವರು ಮಾಡಬೇಕಾಗಿರುವುದು ಜನಾಶೀರ್ವಾದ ಯಾತ್ರೆಯಲ್ಲಾ ರಾಜ್ಯದ ಜನರ ಕ್ಷಮೆ ಯಾಚಿಸುವ ಯಾತ್ರೆ ಮಾಡಬೇಕಿತ್ತು ಎಂಬುದಾಗಿ ಹಾಲಿ ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದರು.
ನಗರದ ಗುರುಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಈ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೊರೊನಾ ಸಂಕಷ್ಠದಲ್ಲಿ ನೊಂದಿರುವ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದಾರೆ. ಇದರಿಂದಾಗಿ ಈ ದೇಶದಲ್ಲಿ ರೈತರು, ಕಾರ್ಮಿಕರು ಜನಸಾಮಾನ್ಯರು ಆತ್ಮಹತ್ಯೆ ಹಾದಿ ಹಿಡಿಯುತ್ತಿದ್ದಾರೆ ಎಂಬುದಾಗಿ ಅವರು ಆರೋಪಿಸಿದರು.
ಮಾಜಿ ಸಚಿವ ಹೆಚ್.ಆಂಜನೇಯ ಮಾತನಾಡಿ, ರಾಜ್ಯದಲ್ಲಿ ಜನಪರ ಆಡಳಿತ ನಡೆಸುವಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿ ಸಂಪೂರ್ಣ ವಿಫಲವಾಗಿದ್ದು, ಅದನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಜನರ ಮನೆಮನೆಗೆ ತಲುಪಿಸುವಂತಹ ಕೆಲಸ ಮಾಡಬೇಕು ರಾಜ್ಯದಲ್ಲಿ ಶೀಘ್ರದಲ್ಲಿ ತಾ.ಪಂ.ಹಾಗೂ ಜಿ.ಪಂ.ಚುನಾವಣೆಗಳು ಬರಲಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಜ್ಜುಗೊಳ್ಳಬೇಕಿದೆ ಎಂಬುದಾಗಿ ಹೇಳಿದರು.
ಮಾಜಿ ಶಾಸಕ ಗೋವಿಂದಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷ ನಿಷ್ಟಾವಂತ ಕಾರ್ಯಕರ್ತರ ಪಕ್ಷವಾಗಿದ್ದು, ಬರಲಿರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷವನ್ನು ಸಂಘಟಿಸುವ ಕೆಲಸ ಮಾಡಬೇಕಿದೆ. ಬರೀ ಪಕ್ಷದ ಪದಾಧಿಕಾರಿಗಳಾಗಿದ್ದರೆ ಸಾಲದು, ಗ್ರಾಮೀಣ ಭಾಗದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಎಲ್ಲಾರು ಕೆಲಸ ಮಾಡಬೇಕಿದೆ ಎಂದರು.
ಮಾಜಿ ಸಚಿವ ಡಿ.ಸುಧಾಕರ್ ಮಾತನಾಡಿ, ಬರಲಿರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ದೃಷ್ಠಿಯಲ್ಲಿ ಇಟ್ಟುಕೊಂಡು ಈಗಾಗಲೇ ತಾಲ್ಲೂಕಿನ 33 ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲಾಗಿದ್ದು, ಅತಿ ಶೀಘ್ರದಲ್ಲೇ ನಗರದ 31 ವಾರ್ಡ್ ಗಳಲ್ಲಿ ವಾರ್ಡ್ ಅಧ್ಯಕ್ಷರುಗಳನ್ನು ಮಾಡಲಾಗುವುದು ಎಂಬುದಾಗಿ ಹೇಳಿದರು.
ಕಳೆದ ಮೇ ತಿಂಗಳಲ್ಲಿ ನಗರದಲ್ಲಿ ನಡೆದ 4 ವಾರ್ಡ್ ಗಳ ಮರುಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸಿದ್ದು, ಬರಲಿರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಅತಿ ಹೆಚ್ಚಿನ ಸ್ಥಾನ ಗಳಿಸಿ ಅಧಿಕಾರ ಚುಕ್ಕಾಣಿ ಹಿಡಿಯಲ್ಲಿದ್ದು, ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ನಮ್ಮ ಕಾರ್ಯಕರ್ತರು ಸಜ್ಜುಗೊಳ್ಳಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾನಂದಿನಿಗೌಡ, ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷೆ ರಜಿಯಾಸುಲ್ತಾನ, ಹಿರಿಯೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಲ್ಲಹಟ್ಟಿ ತಿಪ್ಪೇಸ್ವಾಮಿ ಮಾಜಿ ಶಾಸಕ ಉಮಾಪತಿ, ಮಾಜಿ ಜಿ.ಪಂ.ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಕೆಪಿಸಿಸಿ ಸದಸ್ಯ ಅಮೃತೇಶ್ವರ ಸ್ವಾಮಿ, ತಾಲ್ಲೂಕು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರೇಖಾಮಣಿ, ನಗರಸಭೆ ಅಧ್ಯಕ್ಷೆ ಶಂಷುನ್ನೀಸಾ, ಉಪಾಧ್ಯಕ್ಷ ಬಿ.ಎನ್.ಪ್ರಕಾಶ್, ಸದಸ್ಯರುಗಳಾದ ಅಜಯ್ ಕುಮಾರ್, ಈರಲಿಂಗೇಗೌಡ, ಗುಂಡೇಶ್ ಕುಮಾರ್, ತಿಪ್ಪೇಸ್ವಾಮಿ, ಜಿ.ಪಂ ಮಾಜಿ ಸದಸ್ಯರುಗಳಾದ ಗೀತಾನಾಗಕುಮಾರ್, ಪಾಪಣ್ಣ, ಮುಖಂಡರುಗಳಾದ ಬಿ.ಹೆಚ್.ಮಂಜುನಾಥ್, ಜಿ.ಎಲ್.ಮೂರ್ತಿ, ಚಂದ್ರನಾಯ್ಕ, ಜ್ಞಾನೇಶ್, ಶಿವಕುಮಾರ್, ಗಿರೀಶ್, ಎಪಿಎಂಸಿ ಸದಸ್ಯರು, ತಾ.ಪಂ.ಸದಸ್ಯರು, ಸೇರಿದಂತೆ ಜಿಲ್ಲೆಯ ಎಲ್ಲಾ ಪಧಾದಿಕಾರಿಗಳು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

About The Author

Leave a Reply

Your email address will not be published. Required fields are marked *