March 28, 2024

Chitradurga hoysala

Kannada news portal

ಜಿಲ್ಲೆಯಲ್ಲಿ 08 ಜನರಿಗೆ ಕೋವಿಡ್ ಸೋಂಕು ದೃಢ

1 min read

ಜಿಲ್ಲೆಯಲ್ಲಿ ಎಂಟು ಜನರಿಗೆ ಕೋವಿಡ್ ಸೋಂಕು ದೃಢ

ಚಿತ್ರದುರ್ಗ,ಸೆಪ್ಟೆಂಬರ್09:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಎಂಟು ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,442ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 6, ಚಳ್ಳಕೆರೆ 01 ಹಾಗೂ ಮೊಳಕಾಲ್ಮುರು 01 ಪ್ರಕರಣ ಸೇರಿದಂತೆ ಒಟ್ಟು 8 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 5 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 2381 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್‍ನಿಂದ ಇದುವರೆಗೆ ಒಟ್ಟು 203 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,041 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 198 ಸಕ್ರಿಯ ಪ್ರಕರಣಗಳು ಇವೆ. ಗುರುವಾರದ ಪಾಸಿಟಿವ್ ರೇಟ್ 0.33 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 0.28 ಇದೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 7,64,463 ಜನರ ಮಾದರಿ ಸಂಗ್ರಹಿಸಲಾಗಿದ್ದು, 7,25,934 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1221 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *