May 8, 2024

Chitradurga hoysala

Kannada news portal

ಚಿತ್ರದುರ್ಗ ತಾಲ್ಲೂಕಿನಾದ್ಯಂತ ಮದ್ಯದ ಅಂಗಡಿ ಬಂದ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ

1 min read

ಚಿತ್ರದುರ್ಗ ತಾಲ್ಲೂಕಿನಾದ್ಯಂತ ಮದ್ಯದ ಅಂಗಡಿ ಬಂದ್

ಚಿತ್ರದುರ್ಗ,ಸೆಪ್ಟೆಂಬರ್24:

ಅಕ್ಟೋಬರ್ 2ರಂದು ಹಿಂದೂ ಮಹಾ ಗಣಪತಿ ವಿಗ್ರಹ ವಿಸರ್ಜನಾ ಮೆರವಣಿಗೆ ಪ್ರಯುಕ್ತ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 01ರ ಬೆಳಿಗ್ಗೆ 6 ಗಂಟೆಯಿಂದ ಅಕ್ಟೋಬರ್ 03ರ ಬೆಳಗ್ಗೆ 6 ರವರೆಗೆ ಚಿತ್ರದುರ್ಗ ತಾಲ್ಲೂಕಿನಾದ್ಯಂತ ಬರುವ ಎಲ್ಲಾ ಬಗೆಯ ಮದ್ಯ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ಅಕ್ಟೋಬರ್ 02ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ನಡೆಯಲ್ಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಂಭವ ಇರುವುದಾಗಿ ಪೊಲೀಸ್ ಅಧೀಕ್ಷಕರು ತಿಳಿಸಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1)ರನ್ವಯ ಚಿತ್ರದುರ್ಗ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ. ಪ್ರಸ್ತುತ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಆದೇಶಿಸಿದ್ದಾರೆ.

About The Author

Leave a Reply

Your email address will not be published. Required fields are marked *