March 29, 2024

Chitradurga hoysala

Kannada news portal

ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ. ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು

1 min read

ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಂದ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ,ಅಕ್ಟೋಬರ್04:
2021-22ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು” ಸೇರ್ಪಡೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 5ನೇ ತರಗತಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿದೆ.
ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ರವರ ಕಾರ್ಯಾಲಯ ಚಿತ್ರದುರ್ಗ ಹಾಗೂ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹೊಸದುರ್ಗರವರ ಕಚೇರಿಯಲ್ಲಿ, ಕಚೇರಿ ವೇಳೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 11ರ ಒಳಗಾಗಿ ಪಡೆದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ಇಲ್ಲಿಗೆ ಸಲ್ಲಿಸವುದು. ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಷರತ್ತುಗಳು: 2021-22ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಉಚಿತ ಅರ್ಹತಾ ಪರೀಕ್ಷಾ ಮೂಲಕ ಆಯ್ಕೆ ಮಾಡಲಾಗುವುದು. 5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು, ಆಯ್ಕೆಗೊಂಡ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ದಾಖಲು ಮಾಡಲಾಗುವುದು. 6ನೇ ತರಗತಿಗೆ ಮಾತ್ರ ಜಿಲ್ಲೆಗೆ ನಿಗಧಿ ಪಡಿಸಿರುವ ಗುರಿಗೆ ಅನುಗುಣವಾಗಿ ಪ್ರವೇಶ ಅವಕಾಶವನ್ನು ನೀಡಲಾಗುವುದು. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ.2.00 ಲಕ್ಷಗಳ ಮಿತಿಯೊಳಗೆ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಧೃಡೀಕೃತ ಅಂಕಪಟ್ಟಿಗಳನ್ನು ಅರ್ಜಿ ಜೊತೆಗೆ ಕಡ್ಡಾಯವಾಗಿ ಸಲ್ಲಿಸುವುದು. ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರ, ಪ್ರವೇಶ ಪಡೆದ ಶಾಲೆಯು ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *