April 28, 2024

Chitradurga hoysala

Kannada news portal

ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು NSP-2.0 ವೆಬ್‍ಸೈಟ್‍ನಲ್ಲಿ ನೊಂದಣಿ ಕಡ್ಡಾಯ

1 min read

ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು NSP-2.0 ವೆಬ್‍ಸೈಟ್‍ನಲ್ಲಿ ನೊಂದಣಿ ಕಡ್ಡಾಯ

ಚಿತ್ರದುರ್ಗ,ಅಕ್ಟೋಬರ್04:
2017, 2018, 2019ನೇ ಸಾಲಿನಲ್ಲಿ ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಎಲ್ಲಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು MHRD ನವದೆಹಲಿಯಿಂದ ಸಿದ್ಧಪಡಿಸಿರುವ NSP-2.0 (www.scholarships.gov.in) ವೆಬ್‍ಸೈಟ್‍ನಲ್ಲಿ ನೊಂದಣಿ ಮಾಡುವುದು ಕಡ್ಡಾಯವಾಗಿರುತ್ತದೆ.
ಈಗಾಗಲೇ ತಮ್ಮ ಬಳಿ ಇರುವ USER ID ಮತ್ತು PASSWORDಆನ್ನು ಬಳಸಿ NSP-2.0 Login option ನಲ್ಲಿ ಇರುವ Renewal 2021-22ರಲ್ಲಿ ನೊಂದಣಿ ಮಾಡಬೇಕು. ವಿದ್ಯಾರ್ಥಿಗಳು ಮಾಹಿತಿಯನ್ನು ಅಪ್‍ಲೋಡ್ ಮಾಡಲು ನವೆಂಬರ್ 15 ಕೊನೆಯ ದಿನವಾಗಿದೆ.
2020ನೇ ಸಾಲಿನ ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಎಲ್ಲಾ ವಿದ್ಯಾರ್ಥಿಗಳು ಈ ವೆಬ್‍ಸೈಟ್‍ನಲ್ಲಿ ಹೊಸದಾಗಿ ನೊಂದಾಯಿಸಿಕೊಂಡು ತಮ್ಮ ಮೊಬೈಲ್ ಸಂಖ್ಯೆಗೆ ಬರುವ USER ID ಮತ್ತು PASSWORDಆನ್ನು ಬಳಸಿ ವಿದ್ಯಾರ್ಥಿ ವೇತನದ ಅರ್ಜಿಯನ್ನು ತುಂಬಿ Submit ಮಾಡಬೇಕು. ಇದರ ಹಾರ್ಡ್ ಪ್ರತಿಯನ್ನು ಶಾಲಾ-ಕಾಲೇಜು ಮುಖ್ಯಸ್ಥರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಮುಖ್ಯಸ್ಥರು ತಮ್ಮ ಹಂತದಲ್ಲಿ ಪರಿಶೀಲಿಸಿ ಜಿಲ್ಲಾ ಹಂತಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಿನ ಬಿಇಓ, ಬಿಆರ್‍ಸಿ ಮತ್ತು ಎನ್‍ಎಂಎಂಎಸ್ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಡಯಟ್‍ನ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕ ಎಸ್.ಕೆ.ಬಿ. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Leave a Reply

Your email address will not be published. Required fields are marked *