March 29, 2024

Chitradurga hoysala

Kannada news portal

ಇಬ್ಬರಿಗೆ ಸೋಂಕು ದೃಢ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,591ಕ್ಕೆ ಏರಿಕೆ.

1 min read


ಇಬ್ಬರಿಗೆ ಸೋಂಕು ದೃಢ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,591ಕ್ಕೆ ಏರಿಕೆ.

ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 2 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36,591ಕ್ಕೆ ಏರಿಕೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 2, ಚಳ್ಳಕೆರೆ 0, ಹಿರಿಯೂರು 0, ಹೊಳಲ್ಕೆರೆ 0, ಹೊಸದುರ್ಗ 0, ಹಾಗೂ ಮೊಳಕಾಲ್ಮುರು 0 ಪ್ರಕರಣ ಸೇರಿದಂತೆ ಒಟ್ಟು 2 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 4 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 2125 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ಕೋವಿಡ್‍ನಿಂದ ಸೋಮವಾರ ಒಬ್ಬರು ಮೃತ ಪಟ್ಟಿದ್ದು ಇದುವರೆಗೆ ಒಟ್ಟು 205 ಜನ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 36,282 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 104 ಸಕ್ರಿಯ ಪ್ರಕರಣಗಳು ಇವೆ. ಸೋಮವಾರದ ಪಾಸಿಟಿವ್ ರೇಟ್ 0.09 ಇದ್ದು, ಕಳೆದ ಹತ್ತು ದಿನಗಳ ಪಾಸಿಟಿವ್ ರೇಟ್ 0.40 ಇದೆ.
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 4,97,170 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 8,07,296 ಜನರ ಮಾದರಿ ಸಂಗ್ರಹಿಸಲಾಗಿದ್ದು, 7,68,282 ಜನರ ವರದಿ ನೆಗೆಟೀವ್ ಬಂದಿದೆ. ಉಳಿದ 1557 ಜನರ ವರದಿ ಬರುವುದು ಬಾಕಿ ಇದೆ. 866 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *