April 29, 2024

Chitradurga hoysala

Kannada news portal

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯವರಿಗೆ ಬಸವ ಭೂಷಣ ಪ್ರಶಸ್ತಿ ಪ್ರಧಾನ ಮಾಡಿದ ಮುರುಘಾ ಮಠದ ಶಿಮುಸ : ವೈಚಾರಿಕ ಕ್ರಾಂತಿಯೇ ಶರಣ ಸಂಸ್ಕøತಿ, ಮನುಷ್ಯರನ್ನು ಮನುಷ್ಯರಾಗಿ ನೋಡುವುದೇ ಶರಣ ಸಂಸ್ಕøತಿ.ಬೊಮ್ಮಾಯಿ

1 min read


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರಿಗೆ ಬಸವ ಭೂಷಣ ಪ್ರಶಸ್ತಿ ಪ್ರಧಾನ ಮಾಡಿದ ಮುರುಘಾ ಮಠದ ಶ್ರೀಗಳು:

ವೈಚಾರಿಕ ಕ್ರಾಂತಿಯೇ ಶರಣ ಸಂಸ್ಕøತಿ, ಮನುಷ್ಯರನ್ನು ಮನುಷ್ಯರಾಗಿ ನೋಡುವುದೇ ಶರಣ ಸಂಸ್ಕøತಿ.ಬೊಮ್ಮಾಯಿ

ಚಿತ್ರದುರ್ಗ:                                                    ಶರಣ ಸಂಸ್ಕøತಿ ಉತ್ಸವ ಕಾರ್ಯಕ್ರಮದಲ್ಲಿ ಬಸವ ಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಸವ ಶರಣರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗುರು ವಂದನೆ ಮಾಡಿದರು. ಇದು ಕರಾರು ರಹಿತ ಪ್ರೀತಿ, ಭಕ್ತಿಯನ್ನು ಸಮರ್ಪಣಾ ಭಾವದಿಂದ ಮಾಡಬೇಕು. ವೈಚಾರಿಕ ಕ್ರಾಂತಿಯೇ ಶರಣ ಸಂಸ್ಕøತಿ, ಮನುಷ್ಯರನ್ನು ಮನುಷ್ಯರಾಗಿ ನೋಡುವುದೇ ಶರಣ ಸಂಸ್ಕøತಿ. 12ನೇ ಶತಮಾನದ ಪ್ರತಿಪಾದನೆಯನ್ನು ಶ್ರೀಗಳು ಮಾಡುತ್ತಿದ್ದಾರೆ. ಈಗ 21ನೇ ಶತಮಾನ, ಅಂಕಿಗಳು ತಿರುಗುಮುರುಗಾಗಿವೆ. ಮನುಕುಲದ ಅಭಿವೃದ್ದಿಯಾಗಬೇಕು. ಬಸವಣ್ಣ ಇಂದಿಗೂ ಪ್ರಸ್ತುತ. ಅಸಮಾನತೆ, ಲಿಂಗಬೇದ ಇಂದಿಗೂ ಇದೆ. ಸಂಪೂರ್ಣವಾಗಿ ಇದನ್ನು ತೊಲಗಿಸುವ ಜವಾಬ್ದಾರಿ ಶರಣರಿಂದ ಪ್ರಾರಂಭವಾಗಿದೆ. ಇದನ್ನು ಎಲ್ಲರು ಮುಂದುವರಿಸಿಕೊಂಡು ಹೋಗುವುದು ಜನಸಾಮಾನ್ಯರ ಕರ್ತವ್ಯವಾಗಬೇಕು. ಮೌಢ್ಯಗಳು ತಮಗೆ ದುಃಖ ಉಂಟು ಮಾಡಿವೆ.. ಸಾಮಾಜಿಕ ಸಮಾನತೆ ಸಂತೋಷವನ್ನು ಉಂಟು ಮಾಡಿದೆ. ಯಡ್ಯೂರಪ್ಪನವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಹೋರಾಟದ ಮನೋಭಾವ ಹೊಂದಿದ್ದರು. ಅಧಿಕಾರಕ್ಕೆ ಬಂದಾಗ ಅವುಗಳನ್ನು ಕಾರ್ಯರೂಪಕ್ಕೆ ತಂದರು. ಭದ್ರಾ ಮೇಲ್ದಂಡೆ ಯೋಜನೆಯನ್ನು ಆರಂಭಿಸಿ ಬರದ ನಾಡಾದ ಚಿತ್ರದುರ್ಗಕ್ಕೆ ನೀರಾವರಿ ಸೌಲಭ್ಯವನ್ನು ಹರಿಸಲು ನೆರವಾಗಿದ್ದಾರೆ. ಇದೊಂದು ಜನಪರ ಕೆಲಸ. ಶ್ರೀಗಳು ಹೇಳಿದ ಬೇಡಿಕೆಗಳನ್ನು ಮಾಡಲು ಅಧಿಕಾರಿಗಳೊಂದಿಗೆ ಮಾತನಾಡಿ ಇಂಡಸ್ಟ್ರೀಯಲ್ ಟೌನ್‍ಶಿಪ್ ಮಾಡಲು ಸಿದ್ದನಿದ್ದೇನೆ. ಮಾನ್ಯ ಜಿಲ್ಲಾಧಿಕಾರಿಗಳು ಚಿತ್ರದುರ್ಗದಲ್ಲಿ 1 ಸಾವಿರದಿಂದ 2 ಸಾವಿರ ಎಕರೆ ಭೂಮಿಯನ್ನು ಗುರುತಿಸಿದರೆ ನಾನು ಈ ಕಾರ್ಯ ಮಾಡಲು ಸಿದ್ದನಿದ್ಧೇನೆ. ಸುವರ್ಣ ಕರ್ನಾಟಕ ಕಟ್ಟಬೇಕು ಎಂಬ ಸಂಕಲ್ಪ ಮಾಡಿದ್ದೇನೆ . ಸುಭೀಕ್ಷ, ಸುರಕ್ಷಿತ ಕರ್ನಾಟಕವನ್ನು ,ಸಮಾನತೆಯ ದಿನಾಚರಣೆಯನ್ನು ಸರ್ಕಾರ ವತಿಯಿಂದ ಕಾರ್ಯಕ್ರಮ ಮಾಡುತ್ತೇನೆ ಎಂದು ತಿಳಿಸಿದರು.

ಶರಣಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ನಿಕಟಪೂರ್ವ ಮುಖ್ಯಮಂತ್ರಿಗಳಾದ  ಬಿ.ಎಸ್.ಯಡಿಯೂರಪ್ಪ, ಬಸವಣ್ಣನವರ ಆದರ್ಶಗಳನ್ನು ಮುಂದಿಟ್ಟುಕೊಂಡು ಸಾಗುತ್ತಿರುವ ಈ ಮಠ ಬಸವತತ್ತ್ವ ಪ್ರಚಾರ ಮಾಡುತ್ತಿದೆ. ಕಳೆದ 30 ವರ್ಷದಲ್ಲಿ ತನ್ನದೇ ಆದ ವಿವಿಧ ಸಮಾಜ ಮುಖಿ ಕಾರ್ಯಗಳ ಮೂಲಕ ಸಮಾನತೆಯನ್ನು ಸ್ಥಾಪಿಸಿದೆ. ಪ್ರತಿ ವರ್ಷದ ಶರಣ ಸಂಸ್ಕøತಿ ಉತ್ಸವ ಜನರ ಉತ್ಸವವಾಗಿದೆ. ಇದು ಜನರ ಆಶಾಕಿರಣ. ಧಾರ್ಮೀಕ ವಿಷಯಕ್ಕೆ ಸೀಮಿತವಾಗದೇ 20 ಕೋಟಿ ರೂ.ಗಳನ್ನು ಬಸವಣ್ಣ ಪುತ್ಥಳಿ ನಿರ್ಮಾಣಕ್ಕೆ ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರು ಮಾಡಿದೆ, ಅದರಲ್ಲಿ 5 ಕೋಟಿ ತಲುಪಿದ್ದು, ಉಳಿದದನ್ನು ತಲುಪಿಸುವ ಜವಾಬ್ದಾರಿ ಮುಖ್ಯಮಂತ್ರಿಗಳು ತೆಗೆದುಕೊಳ್ಳಬೇಕು. ಅಕ್ಕಮಹಾದೇವಿಯ ಪ್ರತಿಮೆಯು ಉಡುತಡಿಯಲ್ಲಿ ಸ್ಥಾಪಿಸಲಾಗಿದೆ, ಇಲ್ಲಿ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮ ಅದ್ವಿತೀಯ. ಮುಂದಿನ ದಿನಗಳಲ್ಲಿಯೂ ಈ ಮಠವು ಇಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಲಿ ಎಂದು ನುಡಿದರು.

About The Author

Leave a Reply

Your email address will not be published. Required fields are marked *