ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಎಚ್.ಆಂಜನೇಯ
1 min read
ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣರ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಎಚ್.ಆಂಜನೇಯ
ಹೈದರಾಬಾದ್:ಆಕಸ್ಮಿಕ ಜಾರಿಬಿದ್ದು ಕಾಲು ಮುರಿದುಕೊಂಡಿರುವ ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರನ್ನು ಸೋಮವಾರ ಹೈದರಾಬಾದ್ ನಲ್ಲಿ ಮಾಜಿ ಸಚಿವ ಎಚ್.ಆಂಜನೇಯ ರವರು ಭೇಟಿಮಾಡಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೇಂದು ಆಶಿಸಿದರು.
ಈ ಸಂದರ್ಭದಲ್ಲಿ ಸಮುದಾಯದ ಸ್ಥಳೀಯ ಮುಖಂಡರು ಮತ್ತು ಗಣೇಶ್ ದುಪ್ಪೋಳಿ, ಯಾದಗಿರಿ ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸಾಹೇಬ್ರೋಟಿ, ಯೂತ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಜಯ್ ಕುಮಾರ್ ಕವಾಲಿ, ಮುಖಂಡರಾದ ಪುಂಡೇ ಭಗವಾತ್, ವೀರಾಂಜನೇಯ, ವಿಲಾಸ್ ಮತ್ತಿತರರು ಉಪಸ್ಥಿತರಿದ್ದರು.