ಉಳಿದ ಅವಧಿಗೆ ಯಡಿಯೂರಪ್ಪ ಅವರೆ ಮುಖ್ಯಮಂತ್ರಿ: ಸಚಿವ ಬಿ.ಶ್ರೀರಾಮುಲು
1 min readಚಿತ್ರದುರ್ಗ: ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿ ಇಲ್ಲ , ಉಳಿದ ಅವಧಿಗೆ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಅದರಲ್ಲಿ ಅನುಮಾನ ಬೇಡ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು
ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಚರ್ಚೆಗಳೆಲ್ಲಾ ಕೇವಲ ಬೇಕಿಲ್ಲದವರು ಈ ರೀತಿ ಮಾಡುತ್ತಿದ್ದಾರೆ. ಉಳಿದ ಅವಧಿಗೆ ಬಿಎಸ್ ವೈ ಮುಂದುವರೆಯುತ್ತಾರೆ. ಬಿಜೆಪಿಯಲ್ಲಿ ಯಾವುದೇ ರಹಸ್ಯ ಸಭೆ ನಡೆದಿಲ್ಲ, ಎಲ್ಲರೂ ಒಗ್ಗಟ್ಟಾಗಿದ್ದೇವೆ ಎಂದರು. ಯಡಿಯೂರಪ್ಪ ಅವರು ಉತ್ತಮ ಆಡಳಿತ ನಡೆಸುತ್ತಿದ್ದು ಅವರ ಜೊತೆ ಎಲ್ಲಾರೂ ಒಟ್ಟಾಗಿ ಇದ್ದೇವೆ ಎಂದು ಸ್ಪಷ್ಟಪಡಿಸಿದರು.