March 28, 2024

Chitradurga hoysala

Kannada news portal

ಕನ್ನಡ ರಾಜ್ಯೋತ್ಸವ: ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರು ಭಾಗವಹಿಸಲು ಸೂಚನೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ

1 min read

ಕನ್ನಡ ರಾಜ್ಯೋತ್ಸವ: ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರು ಭಾಗವಹಿಸಲು ಸೂಚನೆ

ಚಿತ್ರದುರ್ಗ :

ನವೆಂಬರ್ 01ರಂದು ಕನ್ನಡ ರಾಜ್ಯೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 01ರಂದು ಬೆಳಿಗ್ಗೆ 7 ಗಂಟೆಗೆ ಸರಿಯಾಗಿ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಶ್ರೀನೀಲಕಂಠೇಶ್ವರ ದೇವಸ್ಥಾನದಿಂದ ಮೆರವಣಿಗೆಯು ಹೊರಟು ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರ, ವಿವಿಧ ಕಲಾ ತಂಡಗಳೊಂದಿಗೆ ಗಾಂಧಿ ವೃತ್ತ, ಸ್ಟೇಟ್ ಬ್ಯಾಂಕ್ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಮದಕರಿ ವೃತ್ತ ಮುಖಾಂತರ ಪೊಲೀಸ್ ಕವಾಯತು ಮೈದಾನದಲ್ಲಿ ಸೇರುವುದು. ನಂತರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಚೇರಿ ಸಂಕೀರ್ಣದಲ್ಲಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮೇಲ್ಕಂಡ ಎಲ್ಲಾ ಕಾರ್ಯಕ್ರಮಗಳಲ್ಲಿ ಗೈರುಹಾಜರಾಗದಂತೆ ಕಡ್ಡಾಯವಾಗಿ ತಪ್ಪದೇ ಭಾಗವಹಿಸಲು ತಿಳಿಸಿದೆ ಹಾಗೂ ಸರ್ಕಾರದ ಕೋವಿಡ್-19ರ ಮಾರ್ಗಸೂಚಿಯಂತೆ ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *