May 2, 2024

Chitradurga hoysala

Kannada news portal

ಕನಕವೃತ್ತದ ಕನಕದಾಸರ ಪ್ರತಿಮೆಗೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾಲಾರ್ಪಣೆ ಮಾಡುವರು:ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ

1 min read



ನಾಳೆ ನ.22ರಂದು ಕನಕದಾಸ ಜಯಂತಿ

ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 22ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಯಂತಿ ಕಾರ್ಯಕ್ರಮದ ಅಂಗವಾಗಿ ನ.22ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವರು.
ಕರ್ನಾಟಕ ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಹಾಗೂ ನೀತಿ ಸಂಹಿತೆಗನುಗುಣವಾಗಿ ಆಚರಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಧನಂಜಯ ತಿಳಿಸಿದ್ದಾರೆ.

About The Author

Leave a Reply

Your email address will not be published. Required fields are marked *