April 20, 2024

Chitradurga hoysala

Kannada news portal

ನಾಳೆ ನವೆಂಬರ್ 30,ಮಂಗಳವಾರ ಹೊಳಲ್ಕೆರೆಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶಕ್ಕೆ ಬನ್ನಿ : ಹೆಚ್.ಆಂಜನೇಯ

1 min read

ನಾಳೆ ನವೆಂಬರ್ 30,ಮಂಗಳವಾರ ಹೊಳಲ್ಕೆರೆಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶಕ್ಕೆ ಬನ್ನಿ ಹೆಚ್.ಆಂಜನೇಯ

ಹೊಳಲ್ಕೆರೆ:                                                ಕಾಂಗ್ರೆಸ್ ಪಕ್ಷ ನಿರಂತರವಾಗಿ ಗೆಲುವು ಸಾಧಿಸಿಕೊಂಡು ಬರುತ್ತಿರುವ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಈ ಬಾರಿ ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರೂ,  ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತ ಶ್ರೀ ಬಿ. ಸೋಮಶೇಖರ್ ರವರು ಅಭ್ಯರ್ಥಿಯಾಗಿ ಸ್ಪರ್ದಿಸಿದ್ದಾರೆ.
ಇವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕಾಗಿದೆ.

ಈ ಹಿನ್ನೆಲೆಯಲ್ಲಿ ಹೊಳಲ್ಕೆರೆ ಪಟ್ಟಣದ ಹೊಸದುರ್ಗ ರಸ್ತೆ ಯಲ್ಲಿರುವ ಸ್ನೇಹ ಸಪ್ತಪದಿ ಕಲ್ಯಾಣಮಂಟಪದಲ್ಲಿ ಮಂಗಳವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ವಿಶೇಷವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ಶಾಸಕರಾದ ಶ್ರೀ. ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರಾದ ಶ್ರೀ. ಹೆಚ್.ಎಂ.ರೇವಣ್ಣ ಸೇರಿದಂತೆ ಜಿಲ್ಲೆಯ ಪಕ್ಷದ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಪಕ್ಷದ ಜಿಲ್ಲಾ, ತಾಲೂಕುಗಳ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಈ ಸಮಾವೇಶಕ್ಕೆ ತಾಲೂಕಿನ ಗ್ರಾಮ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯತಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಗೆ ಆಗಮಿಸಲು ಹೆಚ್.ಆಂಜನೇಯ, ಮಾಜಿ ಸಚಿವ.ಕೋರಿದ್ದರೆ.

About The Author

Leave a Reply

Your email address will not be published. Required fields are marked *